ಅಲ್ಕಾ ಲಾಂಬಾ 
ದೇಶ

ಮಾಜಿ ಶಾಸಕಿ ಅಲ್ಕಾ ಲಂಬಾ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿ ಬೆದರಿಕೆ: ದೆಹಲಿ ವ್ಯಕ್ತಿ ಬಂಧನ

ಮಾಜಿ ಶಾಸಕಿ ಹಾಗೂ ದೆಹಲಿ ಕಾಂಗ್ರೆಸ್ ನಾಯಕಿ ಅಲ್ಕಾ ಲಂಬಾ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ 30 ವರ್ಷದ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. 

ನವದೆಹಲಿ: ಮಾಜಿ ಶಾಸಕಿ ಹಾಗೂ ದೆಹಲಿ ಕಾಂಗ್ರೆಸ್ ನಾಯಕಿ ಅಲ್ಕಾ ಲಂಬಾ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ 30 ವರ್ಷದ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. 

ಅಲ್ಕಾ ಲಂಬಾ ಸೋಮವಾರ ಕಳುಹಿಸಿದ ಇ-ಮೇಲ್ ಮೂಲಕ ದೂರು ಸ್ವೀಕರಿಸಲಾಗಿದೆ. ಆಕೆ ಟ್ವಿಟರ್‌ನಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದು, ಇದರಲ್ಲಿ ವ್ಯಕ್ತಿಯೊಬ್ಬ ತನ್ನ ವಿರುದ್ಧ ನಿಂದನೆ ಮತ್ತು ಅವಹೇಳನಕಾರಿ ಭಾಷೆಯನ್ನು ಬಳಸಿದ್ದಾನೆ ಎಂದು ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ದೆಹಲಿ ಹಿರಿಯ ಪೊಲೀಸರನ್ನು ಭೇಟಿ ಮಾಡಿ ದೂರು ಸಲ್ಲಿಸಿರುವುದಾಗಿ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಮಹಿಳೆಯರನ್ನು ಬಹಿರಂಗವಾಗಿ ಬೆದರಿಸುವ ಮತ್ತು ಸಾಮರಸ್ಯವನ್ನು ಸೃಷ್ಟಿಸುವ ಕೋಮುವಾದಿ ಮನಸ್ಥಿತಿಯ ಜನರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಲಂಬಾ ಹೇಳಿದ್ದಾರೆ.  ಇಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೇ ಅವರು ಇದೇ ಚಾಳಿ ಮುಂದುವರಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ತನಿಖೆಯ ಸಮಯದಲ್ಲಿ, ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿದರು ಮತ್ತು ಆತನನ್ನು ಮನೆಯಿಂದ ವಶಕ್ಕೆ ಪಡೆದರು. ಆರೋಪಿಯನ್ನು ಉತ್ತಮ್ ನಗರದ ಮತಿಯಾಲಾ ಗ್ರಾಮದ ನಿವಾಸಿ ವಿಕಾಸ್ ಸೆಹ್ರಾವತ್ ಎಂದು ಗುರುತಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ದಕ್ಷಿಣ) ಅತುಲ್ ಕುಮಾರ್ ಠಾಕೂರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT