ಸಂಗ್ರಹ ಚಿತ್ರ 
ದೇಶ

ಮಧ್ಯಪ್ರದೇಶ: ಕಂದಕಕ್ಕೆ ಉರುಳಿದ ವಾಹನ: 4 ಸಾವು, 20 ಮಂದಿಗೆ ಗಾಯ

ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯಲ್ಲಿ ಪಿಕಪ್ ವಾಹನವೊಂದು ಕಮರಿಗೆ ಬಿದ್ದು ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರು ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾರ್ವಾನಿ: ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯಲ್ಲಿ ಪಿಕಪ್ ವಾಹನವೊಂದು ಕಮರಿಗೆ ಬಿದ್ದು ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರು ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಟ್ಟದ ಮೇಲಿರುವ ನಾಗಲವಾಡಿ ದೇವಸ್ಥಾನಕ್ಕೆ ಭಕ್ತರ ತಂಡ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ನಾಗಲವಾಡಿ ಪೊಲೀಸ್ ಠಾಣೆಯ ಪ್ರಭಾರಿ ಯಶವಂತ ಬಾದೋಲೆ ತಿಳಿಸಿದರು.

ಮೃತಪಟ್ಟವರು ಧಾರ್ ಜಿಲ್ಲೆಯ ಜಮಾನಿಯಾ ಮತ್ತು ತಲ್ವಾಯಿ ಗ್ರಾಮಗಳ ನಿವಾಸಿಗಳು ಎಂದು ತಿಳಿದುಬಂದಿದೆ. ಸುಮಾರು 30 ಜನರನ್ನು ಹೊತ್ತೊಯ್ಯುತ್ತಿದ್ದ ವಾಹನವು ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿದೆ ಎಂದು ಬಾದೋಲೆ ಹೇಳಿದರು.

ವಾಹನ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆತನನ್ನು ಇನ್ನೂ ಬಂಧಿಸಿಲ್ಲ ಎಂದು ಬಾದೋಲೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ