ಪ್ರಧಾನಿ ಮೋದಿ 
ದೇಶ

ಉಚಿತ ಎಲ್‌ಪಿಜಿ ಸಂಪರ್ಕ ನೀಡುವ ಉಜ್ವಲ ಯೋಜನೆ 2.0 ಗೆ ಪ್ರಧಾನಿ ಮೋದಿ ಚಾಲನೆ

ಪ್ರಧಾನ ಮಂತ್ರಿ ಉಜ್ವಲ ಯೋಜನೆ(ಪಿಎಂಯುವೈ)ಯ ಎರಡನೇ ಹಂತವಾದ ಉಜ್ವಲ 2.0ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಉತ್ತರ ಪ್ರದೇಶದ ಮಹೋಬದಲ್ಲಿ ಎಲ್ ಪಿಜಿ ಸಂಪರ್ಕಗಳನ್ನು ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು.

ಲಖನೌ: ಪ್ರಧಾನ ಮಂತ್ರಿ ಉಜ್ವಲ ಯೋಜನೆ(ಪಿಎಂಯುವೈ)ಯ ಎರಡನೇ ಹಂತವಾದ ಉಜ್ವಲ 2.0ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಉತ್ತರ ಪ್ರದೇಶದ ಮಹೋಬದಲ್ಲಿ ಎಲ್ ಪಿಜಿ ಸಂಪರ್ಕಗಳನ್ನು ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು.

ಉದ್ಘಾಟನೆಯ ನಂತರ ಪ್ರಧಾನಿ ಮೋದಿ ಅವರು ವರ್ಚುವಲ್ ಮೂಲಕ 10 ಮಹಿಳೆಯರಿಗೆ ಉಚಿತ ಗ್ಯಾಸ್ ಸಂಪರ್ಕಗಳನ್ನು ವಿತರಿಸಿದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಧಾನಿ ಪರವಾಗಿ ಮಹಿಳೆಯರಿಗೆ ದಾಖಲೆಗಳನ್ನು ನೀಡಿದರು.

2016 ರಲ್ಲಿ ಆರಂಭವಾದ ಉಜ್ವಲ 1.0 ಸಮಯದಲ್ಲಿ, ಬಿಪಿಎಲ್ ಕುಟುಂಬದ ಐದು ಕೋಟಿ ಮಹಿಳಾ ಸದಸ್ಯರಿಗೆ ಎಲ್‌ಪಿಜಿ ಸಂಪರ್ಕಗಳನ್ನು ಒದಗಿಸುವ ಗುರಿಯನ್ನು ಹೊಂದಲಾಗಿತ್ತು. 

ತರುವಾಯ ಈ ಯೋಜನೆಯನ್ನು 2018 ರ ಏಪ್ರಿಲ್‌ನಲ್ಲಿ ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳಿಗೆ ಹಾಗೂ ಅರಣ್ಯವಾಸಿಗಳಂತಹ ಇನ್ನೂ ಏಳು ವರ್ಗಗಳ ಮಹಿಳಾ ಫಲಾನುಭವಿಗಳಿಗೆ ವಿಸ್ತರಿಸಲಾಯಿತು. ಅಲ್ಲದೆ, ಗುರಿಯನ್ನು ಐದು ಕೋಟಿ ಬದಲು ಎಂಟು ಕೋಟಿ LPG ಸಂಪರ್ಕಗಳಿಗೆ ಪರಿಷ್ಕರಿಸಲಾಗಿಯಿತು ಮತ್ತು 
ನಿಗದಿತ ಸಮಯಕ್ಕಿಂತ ಏಳು ತಿಂಗಳು ಮುಂಚಿತವಾಗಿಯೇ ಆಗಸ್ಟ್ 2019 ರಲ್ಲಿ ಆ ಗುರಿ ಸಾಧಿಸಲಾಗಿದೆ.

ಹಳ್ಳಿಗಳಲ್ಲಿ ಇನ್ನೂ ಮಹಿಳೆಯರು ಉರುವಲನ್ನೇ ಉಪಯೋಗಿಸಿ ಅಡುಗೆ ಮಾಡುತ್ತಿದ್ದಾರೆ. ಆ ಕಷ್ಟವನ್ನು ತಪ್ಪಿಸಿ, ಗ್ರಾಮೀಣ ಪ್ರದೇಶಗಳಿಗೂ ಎಲ್​ಪಿಜಿ ಗ್ಯಾಸ್​ ಕನೆಕ್ಷನ್​ ಕೊಡುವ ಉದ್ದೇಶದೊಂದಿಗೆ, ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಈ ಉಜ್ವಲ ಯೋಜನೆಯನ್ನು ಪರಿಚಯಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

SCROLL FOR NEXT