ದೇಶ

ಖೇಲ್ ರತ್ನ ಪ್ರಶಸ್ತಿಗೆ ಮೇಜರ್ ಧ್ಯಾನ್ ಚಂದ್ ಹೆಸರು ಯುವಕರಿಗೆ ಸ್ಫೂರ್ತಿ: ಪ್ರಧಾನಿ ಮೋದಿ

Lingaraj Badiger

ಲಖನೌ: ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಗೌರವಾರ್ಥ "ಖೇಲ್ ರತ್ನ" ಪ್ರಶಸ್ತಿಗೆ ಮರುನಾಮಕರಣ ಮಾಡಿರುವುದು "ಕೋಟಿಗಟ್ಟಲೆ ಯುವಕರಿಗೆ" ಸ್ಫೂರ್ತಿ ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹೇಳಿದ್ದಾರೆ. 
ಈ ಪ್ರಶಸ್ತಿಗೆ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹೆಸರಿಡಲಾಗಿತ್ತು. ಈಗ ಅದನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಮರುನಾಮಕರಣ ಮಾಡಲಾಗಿದೆ.

ರಾಷ್ಟ್ರವ್ಯಾಪಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಎರಡನೇ ಹಂತದ ಉಜ್ವಲ 2.0 ಅನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದ ಮೋದಿ, ಬುಂದೇಲ್ ಖಂಡದಿಂದ ಬಂದ "ಧ್ಯಾನಚಂದ್" ಗೆ ಗೌರವ ಸಲ್ಲಿಸಿದರು.

"ಇಂದು ನಾನು ಇನ್ನೊಬ್ಬ ಮಹಾನ್ ವ್ಯಕ್ತಿ ಬುಂದೇಲ್‌ ಖಂಡ್‌ನ ಮೇಜರ್ ಧ್ಯಾನ್ ಚಂದ್ ಅವರನ್ನು ನೆನಪಿಸಿಕೊಳ್ಳುತ್ತಿದ್ದೇನೆ. ದೇಶದ ಅತ್ಯುನ್ನತ ಕ್ರೀಡಾ ಪ್ರಶಸ್ತಿಯ ಹೆಸರು ಈಗ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಯಾಗಿದೆ. ಒಲಿಂಪಿಕ್ಸ್‌ನಲ್ಲಿ ನಮ್ಮ ಯುವ ಕ್ರೀಡಾಪಟುಗಳ ಅದ್ಭುತ ಪ್ರದರ್ಶನದ ನಡುವೆ ಖೇಲ್ ರತ್ನ ಪ್ರಶಸ್ತಿ ಮರುನಾಮಕರಣ ಕೋಟಿಗಟ್ಟಲೆ ಯುವಕರಿಗೆ ಸ್ಫೂರ್ತಿ ನೀಡುತ್ತದೆ.

"ಈ ಬಾರಿ ನಮ್ಮ ಆಟಗಾರರು ಕೇವಲ ಪದಕಗಳನ್ನು ಗೆದ್ದಿಲ್ಲ, ಆದರೆ ಅನೇಕ ಕ್ರೀಡೆಗಳಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ನಮಗೆ ಉತ್ತಮ ಭವಿಷ್ಯದ ಸೂಚನೆಯನ್ನು ನೀಡಿದ್ದಾರೆ" ಎಂದು ಪ್ರಧಾನಿ ಹೇಳಿದರು.

SCROLL FOR NEXT