ದೇಶ

ಜಂತರ್ ಮಂತರ್ ನಲ್ಲಿ ಕೋಮು ಪ್ರಚೋದಕ ಘೋಷಣೆ: ಹಿಂದೂ ರಕ್ಷಾ ದಳದ ನಾಯಕರ ಬಂಧನಕ್ಕೆ ಪೊಲೀಸ್ ದಾಳಿ

Srinivas Rao BV

ನವದೆಹಲಿ: ಜಂತರ್ ಮಂತರ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಕೋಮು ಪ್ರಚೋದಕ ಘೋಷಣೆ ಕೂಗಿದ್ದ ಪ್ರಕರಣದಲ್ಲಿ ಹಿಂದೂ ರಕ್ಷಾ ದಳದ ನಾಯಕರನ್ನು ಬಂಧಿಸಲು ಪೊಲೀಸರು ದಾಳಿ ನಡೆಸಿದ್ದಾರೆ. 

ಜಂತರ್ ಮಂತರ್ ನಲ್ಲಿ ನಡೆದ ಪ್ರತಿಭಟನೆ ವೇಳೆ ಪಿಂಕಿ ಚೌಧರಿ, ಉತ್ತಮ್ ಮಲೀಕ್ ಅವರನ್ನು ಕೋಮು ಪ್ರಚೋದಕ ಘೋಷಣೆ ಕೂಗಿದ್ದರು.

ದೆಹಲಿಯಲ್ಲಿ ಹಾಗೂ ನೆರೆ ರಾಜ್ಯಗಳಲ್ಲಿ ಹಿಂದೂ ರಕ್ಷಾ ದಳದ ನಾಯಕರನ್ನು ಬಂಧಿಸಲು ರೇಡ್ ನಡೆಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಇಬ್ಬರೂ ಮೊಬೈಲ್ ಫೋನ್ ಗಳನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದು, ಆ.07 ರಿಂದ ಮನೆಗೆ ತೆರಳಿಲ್ಲ ಎಂದು ಹೇಳಿದ್ದಾರೆ. 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಕ್ತಾರ, ಅಡ್ವೊಕೇಟ್  ಅಶ್ವಿನಿ ಉಪಾಧ್ಯಾಯ ಸೇರಿದಂತೆ 6 ಮಂದಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. 

ಬ್ಯಾಂಕ್ ಆಫ್ ಬರೋಡ ಬಳಿ ನಡೆದ ಪ್ರತಿಭಟನೆಯಲ್ಲಿ ಕೋಮು ಪ್ರಚೋದಕ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಕನ್ನೌಟ್ ನ ಪೊಲೀಸ್ ಠಾಣೆಯಲ್ಲಿ ಪ್ರಕರಣದ ಸಂಬಂಧ ಎಫ್ಐಆರ್ ದಾಖಲಿಸಲಾಗಿತ್ತು. ಆರೋಪಿಗಳನ್ನು ಅಶ್ವಿನಿ ಉಪಾಧ್ಯಾಯ್, ಪ್ರೀತ್ ಸಿಂಗ್, ದೀಪಕ್ ಸಿಂಗ್, ದೀಪಕ್ ಕುಮಾರ್, ವಿನೋದ್ ಶರ್ಮಾ, ವಿನೀತ್ ಭಾಜ್ಪೈ ಎಂದು ಗುರುತಿಸಲಾಗಿದೆ. 

ಇವರನ್ನು ಬಂಧಿಸಲಾಗಿದ್ದು ಶೀಘ್ರವೇ ಎನ್ ಸಿಆರ್ ನ ಮಾಜಿಸ್ಟ್ರೇಟ್ ಎದುರು ಹಾಜರುಪಡಿಸಲಾಗುತ್ತದೆ. ಪ್ರೀತ್ ಸಿಂಗ್ ಸೇವ್ ಇಂಡಿಯಾ ಫೌಂಡೇಶನ್ ನ ನಿರ್ದೇಶಕರಾಗಿದ್ದಾರೆ. ದೀಪಕ್ ಸಿಂಗ್, ದೀಪಕ್ ಕುಮಾರ್ ಹಾಗೂ ವಿನೋದ್ ಶರ್ಮ ಹಲವು ಬಲಪಂಥೀಯ ಸಂಘಟನೆಯೊಂದಿಗೆ ಗುರುತಿಸಿಕೊಂಡಿದ್ದರು. ಜಂತರ್ ಮಂತರ್ ನಲ್ಲಿ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗತೊಡಗಿತ್ತು. 

SCROLL FOR NEXT