ರಕ್ಷಣಾ ಕಾರ್ಯಾಚರಣೆ 
ದೇಶ

ಹಿಮಾಚಲದ ಕಿನ್ನೌರ್‌ನಲ್ಲಿ ಭೂಕುಸಿತ: ಮತ್ತೆ ನಾಲ್ವರ ಶವ ಪತ್ತೆ, ಸಾವಿನ ಸಂಖ್ಯೆ 14ಕ್ಕೆ ಏರಿಕೆ

ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೂಕುಸಿತ ಸ್ಥಳದಲ್ಲಿ ಗುರುವಾರ ಮತ್ತೆ ನಾಲ್ಕು ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಸಾವಿನ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಿಮ್ಲಾ: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೂಕುಸಿತ ಸ್ಥಳದಲ್ಲಿ ಗುರುವಾರ ಮತ್ತೆ ನಾಲ್ಕು ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಸಾವಿನ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಇಂದು ಪುನರಾರಂಭಗೊಂಡ ನಂತರ ಸ್ಥಳದಿಂದ ಇನ್ನೂ ನಾಲ್ಕು ಶವಗಳನ್ನು ಹೊರತೆಗೆಯಲಾಗಿದೆ ಎಂದು ಕಿನ್ನೌರ್ ಉಪ ಆಯುಕ್ತ ಅಬಿದ್ ಹುಸೇನ್ ಸಾದಿಕ್ ಅವರು ಪಿಟಿಐಗೆ ತಿಳಿಸಿದ್ದಾರೆ.

ಈವರೆಗೆ 14 ಶವಗಳನ್ನು ಪತ್ತೆ ಮಾಡಲಾಗಿದೆ. ಹಿಮಾಚಲ ರಸ್ತೆ ಸಾರಿಗೆ ಸಂಸ್ಥೆ(ಎಚ್‌ಆರ್‌ಟಿಸಿ) ಬಸ್ ಸೇರಿದಂತೆ ಹಲವು ವಾಹನಗಳು ಭೂಕುಸಿತದ ನಂತರ ಅವಶೇಷಗಳ ಅಡಿಯಲ್ಲಿ ಹೂತುಹೋಗಿವೆ ಎಂದು ರಾಜ್ಯ ವಿಪತ್ತು ನಿರ್ವಹಣಾ ನಿರ್ದೇಶಕ ಸುದೇಶ್ ಕುಮಾರ್ ಮೊಖ್ತಾ ಅವರು ಹೇಳಿದ್ದಾರೆ.

ಆದಾಗ್ಯೂ, ಒಂದು ಬೊಲೆರೊ ಕಾರನ್ನು ಇನ್ನೂ ಪತ್ತೆ ಮಾಡಲು ಸಾಧ್ಯವಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್ ಡಿಆರ್ ಎಫ್), ಐಟಿಬಿಪಿ ಮತ್ತು ಸ್ಥಳೀಯ ಪೊಲೀಸ್ ಹಾಗೂ ಗೃಹರಕ್ಷಕ ದಳದ ಸದಸ್ಯರು ಜಂಟಿಯಾಗಿ ನಡೆಸುತ್ತಿರುವ ರಕ್ಷಣಾ ಕಾರ್ಯಾಚರಣೆ ಇಂದು ಬೆಳಗ್ಗೆ 6 ಗಂಟೆಗೆ ಪುನರಾರಂಭವಾಯಿತು ಎಂದು ಮೊಕ್ತಾ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT