ಸಾಂದರ್ಭಿಕ ಚಿತ್ರ 
ದೇಶ

ಜೈಪುರದಲ್ಲಿ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ; ಕುಟುಂಬ ಸದಸ್ಯರಿಂದ ಪ್ರತಿಭಟನೆ

ಜೈಪುರದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಜೈಪುರ: ಜೈಪುರದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಬುಧವಾರ ಸಂಜೆಯಿಂದ ಕಾಣೆಯಾಗಿದ್ದ ಬಾಲಕಿಯ ಮೃತದೇಹವು ಜಿಲ್ಲೆಯ ನರೇನಾ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳದ ಬಳಿ ಗುರುವಾರ ಪತ್ತೆಯಾಗಿದೆ. 

"ಬಾಲಕಿಯ ಮನೆಯಿಂದ ಸುಮಾರು 3 ಕಿಮೀ ದೂರದಲ್ಲಿರುವ ಕೊಳದ ಬಳಿ ಶವ ಪತ್ತೆಯಾಗಿದೆ. ಬುಧವಾರ ಸಂಜೆ ಆಕೆ ತನ್ನ ಮನೆಯಿಂದ ನಾಪತ್ತೆಯಾಗಿದ್ದಳು" ಎಂದು ಸರ್ಕಲ್ ಅಧಿಕಾರಿ ದುಡು ಉಮೇಶ್ ಕುಮಾರ್ ಅವರು ತಿಳಿಸಿದ್ದಾರೆ.

ಶವವನ್ನು ಪಟ್ಟಣದ ಸ್ಥಳೀಯ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಆದರೆ ಕುಟುಂಬ ಸದಸ್ಯರು ಶವವನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ ಮತ್ತು ಆರೋಪಿಗಳನ್ನು ಬಂಧಿಸಲು ಒತ್ತಾಯಿಸುತ್ತಿದ್ದಾರೆ ಎಂದು ಅವರು ಹೇಳಿದರು.

"ಆರೋಪಿಯನ್ನು ಗುರುತಿಸಲು ಮತ್ತು ಬಂಧಿಸಲು ವಿವಿಧ ಪೊಲೀಸ್ ತಂಡಗಳನ್ನು ರಚಿಸಲಾಗಿದೆ" ಎಂದು ಉಮೇಶ್ ಕುಮಾರ್ ಅವರು ತಿಳಿಸಿದ್ದಾರೆ.

ಬಾಲಕಿಯ ಕುಟುಂಬ ಸದಸ್ಯರು ಮತ್ತು ಗ್ರಾಮಸ್ಥರು ಶವಾಗಾರದ ಹೊರಗೆ ಪ್ರತಿಭಟನೆ ನಡೆಸುತ್ತಿದ್ದು, ಅವರನ್ನು ಸಮಾಧಾನಪಡಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಕೊನೆಯ ಓವರ್ ನಲ್ಲಿ ಭರ್ಜರಿ ಜಯ, ಪ್ಲೇಆಫ್ ಗೆ RCB ಲಗ್ಗೆ, ರೇಸ್ ನಿಂದ PBKS ಔಟ್, CSK ಆಸೆ ಜೀವಂತ!

IPL 2026: RCB vs PBKS ಪಂದ್ಯದಲ್ಲಿ ಎರಡು ಭಾರೀ ದಾಖಲೆ ನಿರ್ಮಿಸಿದ Virat Kohli

ಸ್ವಾತಂತ್ರ್ಯ ಹೋರಾಟಗಾರ ಗಣೇಶ್ ಶಂಕರ್ ವಿದ್ಯಾರ್ಥಿ ಪ್ರತಿಮೆ ಸ್ಥಾಪನೆಗೆ ವಿಳಂಬ: ಯೋಗಿಗೆ ರಕ್ತದಲ್ಲಿ ಪತ್ರ ಬರೆದ SP ಶಾಸಕ!

ಬೌಂಡರಿ ತಡೆದ್ರೆ ಬಿಡ್ತೀವಾ.. 42 ಡಿಗ್ರಿ ತಾಪಮಾನದಲ್ಲೂ 4 ರನ್ ಓಡಿಸಿದ Virat Kohli, ಹೈರಾಣಾದ DDP, ವೈರಲ್ ವಿಡಿಯೋ ಅಸಲೀಯತ್ತು ಬಯಲು

ಯುರೇನಿಯಂ ಹಸ್ತಾಂತರ, ಪರಮಾಣು ನಿರ್ಬಂಧ: 5 ಷರತ್ತುಗಳನ್ನು ಇರಾನ್ ಮುಂದಿಟ್ಟ ಅಮೆರಿಕ!

SCROLL FOR NEXT