ಸಾಂದರ್ಭಿಕ ಚಿತ್ರ 
ದೇಶ

ಸೆಸ್ ಕಡಿಮೆ ಮಾಡಿದ ಸಿಎಂ ಸ್ಟಾಲಿನ್, ತಮಿಳುನಾಡಿನಲ್ಲಿ ಪೆಟ್ರೋಲ್ ಬೆಲೆ 3 ರೂ. ಇಳಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ರಾಜ್ಯದ ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಿದ್ದು, ಪೆಟ್ರೋಲ್ ಮೇಲಿನ ಸೆಸ್ ಕಡಿಮೆ ಮಾಡಿದ್ದಾರೆ. ಇದರಿಂದ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 3 ರೂಪಾಯಿ ಅಗ್ಗವಾಗಲಿದೆ.

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ರಾಜ್ಯದ ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಿದ್ದು, ಪೆಟ್ರೋಲ್ ಮೇಲಿನ ಸೆಸ್ ಕಡಿಮೆ ಮಾಡಿದ್ದಾರೆ. ಇದರಿಂದ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 3 ರೂಪಾಯಿ ಅಗ್ಗವಾಗಲಿದೆ.

ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಸೂಚನೆಯಂತೆ ರಾಜ್ಯ ಸರ್ಕಾರ ಪೆಟ್ರೋಲ್ ಮೇಲಿನ ಸೆಸ್ ಅನ್ನು ಪ್ರತಿ ಲೀಟರ್‌ಗೆ 3 ರೂಪಾಯಿ ಕಡಿಮೆ ಮಾಡುತ್ತಿದೆ ಎಂದು ತಮಿಳುನಾಡು ಹಣಕಾಸು ಸಚಿವರು ಹೇಳಿದ್ದಾರೆ.

ಸೆಸ್ ಕಡಿಮೆ ಮಾಡಿರುವುದರಿಂದ ರಾಜ್ಯ ಸರ್ಕಾರಕ್ಕೆ 1160 ಕೋಟಿ ಆದಾಯ ನಷ್ಟವಾಗುತ್ತದೆ ಎಂದು ತಮಿಳುನಾಡು ಹಣಕಾಸು ಸಚಿವ ಪಿಟಿಆರ್ ಪಳನಿವೇಲ್ ತ್ಯಾಗರಾಜನ್ ಅವರು ತಿಳಿಸಿದ್ದಾರೆ.

ಡಿಎಂಕೆ ನೇತೃತ್ವದ ಸರ್ಕಾರ ಶುಕ್ರವಾರ ತನ್ನ ಮೊದಲ ಬಜೆಟ್‌ ಮಂಡಿಸಿತು. ಹಣಕಾಸು ಸಚಿವ ಪಲನ್ವೇಲ್‌ ತ್ಯಾಗರಾಜನ್‌ ಅವರು ಇದೇ ಮೊದಲ ಬಾರಿಗೆ ಕಾಗದ ರಹಿತ ಬಜೆಟ್ ಮಂಡಿಸಿದರು. ಈ ವೇಳೆ, ರಾಜ್ಯ ಸರ್ಕಾರಿ ನೌಕರರಿಗೆ ಏಪ್ರಿಲ್ 2022 ರಿಂದ ಜಾರಿಗೆ ಬರುವಂತೆ ಪರಿಷ್ಕೃತ ಡಿಎ ಹಾಗೂ ಮಹಿಳಾ ಪೌರಕಾರ್ಮಿಕರ ಹೆರಿಗೆ ರಜೆಯನ್ನು 9 ತಿಂಗಳಿಂದ 12 ತಿಂಗಳಿಗೆ ಹೆಚ್ಚಿಸುವುದು ಸೇರಿದಂತೆ ಹಲವು ಘೋಷಣೆಗಳನ್ನು ಮಾಡಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

TVK ಶಾಸಕಾಂಗ ಪಕ್ಷದ ನಾಯಕನಾಗಿ ವಿಜಯ್ ಆಯ್ಕೆ; ಮೇ 7ರಂದು ಸಿಎಂ ಆಗಿ ಪ್ರಮಾಣ ವಚನ?

IPL 2026: DC ಸೋಲಿಸಿ ತಮ್ಮ 5ನೇ ಗೆಲುವು ದಾಖಲಿಸಿದ CSK; ದಾಖಲೆ ಸೃಷ್ಟಿ!

ಬೆಂಬಲ ನೀಡುವಂತೆ ವಿಜಯ್ ಮನವಿ: ನಿರ್ಧಾರ ತೆಗೆದುಕೊಳ್ಳಲು ರಾಜ್ಯ ಕಾಂಗ್ರೆಸ್‌ಗೆ ಬಿಟ್ಟಿದ್ದೇವೆ: ಕೆಸಿ ವೇಣುಗೋಪಾಲ್

ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಂಖ್ಯೆ 33 ರಿಂದ 37ಕ್ಕೆ ಹೆಚ್ಚಳ: ಪ್ರಧಾನಿ ಮೋದಿ ಸಂಪುಟ ಅನುಮೋದನೆ!

ಕಬ್ಬು ಬೆಳೆಗಾರರ ನೆರವಿಗೆ ಕೇಂದ್ರ; ಕ್ವಿಂಟಾಲ್ ಗೆ ₹365 FRP ಹೆಚ್ಚಿಸಲು ಅನುಮೋದನೆ!

SCROLL FOR NEXT