ಕೋವಿಡ್ ಸಾಂಕ್ರಾಮಿಕ: ಮಹಾರಾಷ್ಟ್ರದಲ್ಲಿ 5,787 ಹೊಸ ಸೋಂಕು ಪ್ರಕರಣಗಳು ಪತ್ತೆ, 134 ಸಾವು ವರದಿ
ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ನಲುಗಿ ಹೋಗುತ್ತಿರುವ ಮಹಾರಾಷ್ಟ್ರದಲ್ಲಿ ಇಂದು 5 ಸಾವಿರಕ್ಕೂ ಅಧಿಕ ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 134 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ಮುಂಬೈ: ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ನಲುಗಿ ಹೋಗುತ್ತಿರುವ ಮಹಾರಾಷ್ಟ್ರದಲ್ಲಿ ಇಂದು 5 ಸಾವಿರಕ್ಕೂ ಅಧಿಕ ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 134 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ಈ ಕುರಿತಂತೆ ಮಹಾರಾಷ್ಟ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 5,787 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 63,87,863ಕ್ಕೆ ಏರಿಕೆಯಾಗಿದೆ. ಅಂತೆಯೇ ಇದೇ ಅವಧಿಯಲ್ಲಿ 134 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಒಟ್ಟಾರೆ ಸಾವಿನ ಸಂಖ್ಯೆ 1,34,909ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ 5,352 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಒಟ್ಟಾರೆ ಗುಣಮುಖರ ಸಂಖ್ಯೆ 61,86,223ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಮಹಾರಾಷ್ಟ್ರದಲ್ಲಿ 63,262 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದುಬಂದಿದೆ.
ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 9,36,000 ಮಂದಿಗೆ ಕೋವಿಡ್ ಲಸಿಕೆ ಹಾಕಲಾಗಿದ್ದು, ಇದು ಈ ವರೆಗಿನ ಗರಿಷ್ಠ ಲಸಿಕೆ ನೀಡಿಕೆ ಪ್ರಮಾಣವಾಗಿದೆ. ಈ ಹಿಂದೆ ಜುಲೈ 3ರಂದು 8,11,000 ಮಂದಿಗೆ ಲಸಿಕೆ ಹಾಕಲಾಗಿತ್ತು. ಇದು ಈ ವರೆಗಿನ ಗರಿಷ್ಠ ಪ್ರಮಾಣವಾಗಿತ್ತು ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.