ಅಸ್ಸಾಂ-ಮಿಜೊರಾಮ್ ಗಡಿ ಭಾಗದ ಶಾಲೆಯ ಬಳಿ ಸ್ಫೋಟ
ಅಸ್ಸಾಂ-ಮಿಜೊರಾಮ್ ಗಡಿ ಭಾಗದ ವಿವಾದ ಮುಕ್ತಾಯಗೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ.
ಗುವಾಹಟಿ: ಅಸ್ಸಾಂ-ಮಿಜೊರಾಮ್ ಗಡಿ ಭಾಗದ ವಿವಾದ ಮುಕ್ತಾಯಗೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ.
ಅಸ್ಸಾಂ ನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಬಳಿಯಲ್ಲಿ ದುಷ್ಕರ್ಮಿಗಳು ಸ್ಫೋಟ ನಡೆಸಿದ್ದಾರೆ. ಶುಕ್ರವಾರ ಈ ಘಟನೆ ನಡೆದಿದ್ದು, ಗಡಿ ಭಾಗಕ್ಕೆ 1 ಕಿಲೋಮೀಟರ್ ಗಿಂತಲೂ ಕಡಿಮೆ ದೂರದಲ್ಲಿ ಈ ಕೃತ್ಯ ಸಂಭವಿಸಿದೆ.
ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಪೌರಾಡಳಿತದ ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಶುಕ್ರವಾರ ರಾತ್ರಿ 11-11:30 ಈ ಸ್ಫೋಟ ನಡೆಸಿದ್ದು, ಶಾಲೆಯ ಕಾಂಪೌಂಡ್ ನ ಭಾಗ ಭಾಗಶಃ ಹಾನಿಯಾಗಿದೆ. "ಸ್ಥಳೀಯರಿಗೆ ಸ್ಫೋಟದ ಸದ್ದು ಕೇಳುತ್ತಿದ್ದಂತೆಯೇ ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರು" ಎಂದು ಹೈಲಕಂಡಿ ಎಸ್ ಪಿ ಗೌರವ್ ಉಪಾಧ್ಯಾಯ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಮಾಹಿತಿ ನೀಡಿದ್ದಾರೆ.
ಅಸ್ಸಾಂ ನ ಗುಟ್ಗುಟಿ ಗಡಿ ಹೊರಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಅಧಿಕಾರಿಗಳು ಈಗಲೂ ಸ್ಥಳದಲ್ಲಿದ್ದಾರೆ. ತಕ್ಷಣಕ್ಕೆ ಯಾವುದೇ ಆಸ್ತಿಪಾಸ್ತಿಗೂ ಹಾನಿಯುಂಟಾಗಿಲ್ಲ ಎಂದು ಉಪಾಧ್ಯಾಯ ಹೇಳಿದ್ದಾರೆ. ಜುಲೈ 26 ರಂದು ಪ್ರಾರಂಭವಾಗಿದ್ದ ಅಂತರರಾಜ್ಯ ಗಡಿ ಹಿಂಸಾಚಾರದಲ್ಲಿ ಅಸ್ಸಾಂ ನ 6 ಪೊಲೀಸ್ ಸಿಬ್ಬಂದಿಗಳು ಸಾವನ್ನಪ್ಪಿದ್ದರು. ಎಸ್ ಪಿ ಗಾಯಗೊಂಡಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.