ಪ್ರಶಾಂತ್ ಕಿಶೋರ್, ಮಮತಾ ಬ್ಯಾನರ್ಜಿ 
ದೇಶ

ಐ- ಪಿಎಸಿ, ಟಿಎಂಸಿ ಒಪ್ಪಂದ 2026 ರವರೆಗೂ ವಿಸ್ತರಣೆ

ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ ನಂತರ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪ್ರಶಾಂತ್ ಕಿಶೋರ್ ಅವರ ಭಾರತೀಯ ರಾಜಕೀಯ ಕ್ರಿಯಾ ಸಮಿತಿಯ (ಐ-ಪಿಎಸಿ) ಜೊತೆಗಿನ ರಾಜಕೀಯ  ಒಪ್ಪಂದ  ಮುಂದಿನ ಐದು ವರ್ಷಗಳವರೆಗೆ ವಿಸ್ತರಿಸಲಾಗಿದೆ.

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ ನಂತರ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪ್ರಶಾಂತ್ ಕಿಶೋರ್ ಅವರ ಭಾರತೀಯ ರಾಜಕೀಯ ಕ್ರಿಯಾ ಸಮಿತಿಯ (ಐ-ಪಿಎಸಿ) ಜೊತೆಗಿನ ರಾಜಕೀಯ  ಒಪ್ಪಂದ  ಮುಂದಿನ ಐದು ವರ್ಷಗಳವರೆಗೆ ವಿಸ್ತರಿಸಲಾಗಿದೆ.

2026 ರವರೆಗೆ ಇದನ್ನು ವಿಸ್ತರಿಸುವುದಾಗಿ ನವದೆಹಲಿಯಲ್ಲಿ ಶನಿವಾರ  ಟಿಎಂಸಿ ರಾಜ್ಯಸಭಾ ಸಂಸದ ಡೆರೆಕ್ ಒ'ಬ್ರೇನ್ ತಿಳಿಸಿದ್ದಾರೆ. ಇದರ ಬಗ್ಗೆ ಹೆಚ್ಚಿನ  ಪ್ರತಿಕ್ರಿಯೆ ನೀಡಲು ಬಯಸದ ಅವರು, ಮುಂದಿನ  2024 ರಲ್ಲಿ ಲೋಕಸಭೆ ಸೇರಿದಂತೆ ಮುಂಬರುವ ಚುನಾವಣೆಗಳಲ್ಲಿ ಪಕ್ಷದ  ಗೆಲುವಿನ ಓಟ ಮುಂದುವರಿಸಲು ಸಹಕಾರಿಯಾಗಲಿದೆ  ಎಂದು ಹೇಳಿದರು.

 ಟಿಎಂಸಿಯೊಂದಿಗಿನ ಐಪಿಎಸಿಯ ಸಂಯೋಜನೆಯ ವಿಧಾನ ಔಪಚಾರಿಕಗೊಳಿಸಲಾಗುತ್ತಿದ್ದು  ಮುಂದಿನ ಸಾರ್ವತ್ರಿಕ ಚುನಾವಣೆಗಳಲ್ಲಿ ರಾಷ್ಟ್ರ  ರಾಜಕೀಯದಲ್ಲಿ ಟಿಎಂಸಿ ಮಹತ್ತರ ಪಾತ್ರ ವಹಿಸಲಿದೆ ಎಂದು ಘೋಷಿಸಲಾಗಿದೆ.

ಸಂಸದರನ್ನು ಹೊಂದಿರುವ ಟಿಎಂಸಿ  ಕಾಂಗ್ರೆಸ್ ನಂತರ ಲೋಕಸಭೆಯಲ್ಲಿ ಎರಡನೇ ಅತಿದೊಡ್ಡ ವಿರೋಧ ಪಕ್ಷವಾಗಿದೆ. 294 ಸದಸ್ಯರ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ 213 ಸ್ಥಾನಗಳನ್ನು ಗೆಲ್ಲುವ ಮೂಲಕ ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಸತತ ಮೂರನೇ ಅವಧಿಗೆ ಅಧಿಕಾರ  ಪಡೆಯುವಲ್ಲಿ ಐ-ಪಿಎಸಿ ಮಹತ್ವದ ಪಾತ್ರ ವಹಿಸಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸೌಜನ್ಯ ಕೇಸ್‌ ಮರು ತನಿಖೆಗೆ ಸುಪ್ರೀಂ ಆದೇಶ: ಶ್ರೀ ಕ್ಷೇತ್ರ ಧರ್ಮಸ್ಥಳ ಹೇಳಿದ್ದು ಏನು?

ಮಾಗಡಿ: ಚಕ್ರಬಾವಿ ಮರುಳಸಿದ್ದೇಶ್ವರ ಜಂಗಮ ಮಠದ ಸ್ವಾಮೀಜಿ ಲಿಂಗೈಕ್ಯ

ರಾಮ ಮಂದಿರದಲ್ಲಿ ಕಳ್ಳತನದ 105 ಘಟನೆ ಸಿಸಿಟಿವಿಯಲ್ಲಿ ಪತ್ತೆ: ಸುಪ್ರೀಂ ಕೋರ್ಟ್‌ಗೆ ಎಸ್‌ಐಟಿ ಮಾಹಿತಿ

5 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಮಂಗಳೂರಿನ ಬಜಪೆ ಠಾಣೆ ಇನ್ಸ್‌ಪೆಕ್ಟರ್ ಬಾಲಕೃಷ್ಣ!

KPSC ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ರಚನೆ; ಹೈಕೋರ್ಟ್​​ನಿಂದ ಮಹತ್ವದ ಆದೇಶ