ದೇಶ

ಹರಿಯಾಣದ ಅಂಬಾಲಾದಲ್ಲಿ ಭೀಕರ ರಸ್ತೆ ಅಪಘಾತ; ಇಬ್ಬರು ಪೋಲಿಸರು ಸೇರಿ ನಾಲ್ವರು ಸಾವು

Lingaraj Badiger

ಅಂಬಾಲ: ಹರಿಯಾಣದ ಅಂಬಾಲಾ-ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪೊಲೀಸರು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.

ಜಗ್ಗಿ ನಗರ ಕೇಂದ್ರದ ಬಳಿ ಈ ಅಪಘಾತ ನಡೆದಿದ್ದು, ಇಬ್ಬರು ಪೊಲೀಸ್ ಅಧಿಕಾರಿಗಳು ತಮ್ಮ ಪೊಲೀಸ್ ವ್ಯಾನ್ ಬಳಿ ನಿಂತು ಇತರ ಇಬ್ಬರೊಂದಿಗೆ ಮಾತನಾಡುತ್ತಿದ್ದಾಗ ಟ್ರಕ್ ಅವರ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಾಲ್ವರನ್ನು ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ  ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಸಹಾಯಕ ಸಬ್ ಇನ್ಸ್‌ಪೆಕ್ಟರ್ ನಸೀಬ್ ಸಿಂಗ್(52), ಕಾನ್‌ಸ್ಟೇಬಲ್ ಬಲ್ವಿಂದರ್ ಸಿಂಗ್ (28), ಮನೀಶ್ ಕುಮಾರ್(30) ಮತ್ತು ಪರ್ದೀಪ್ ಕುಮಾರ್ (32) ಎಂದು ಗುರುತಿಸಲಾಗಿದೆ.

SCROLL FOR NEXT