ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮ 
ದೇಶ

ಶಾಂತಿ ಮಾತುಕತೆಗೆ ಯುಎಲ್ಎಫ್ಎ-ಐ ನ್ನು ಆಹ್ವಾನಿಸಿದ ಅಸ್ಸಾಂ ಸಿಎಂ 

ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮ ಆ.15 ರಂದು ಯುಎಲ್ಎಫ್ಎ-ಐ ನ ಮುಖ್ಯಸ್ಥ ಪರೇಶ್ ಬರುವಾ ಅವರನ್ನು ಮಾತುಕತೆಗೆ ಆಹ್ವಾನಿಸಿದ್ದಾರೆ. 

ಗುವಾಹಟಿ: ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮ ಆ.15 ರಂದು ಯುಎಲ್ಎಫ್ಎ-ಐ ನ ಮುಖ್ಯಸ್ಥ ಪರೇಶ್ ಬರುವಾ ಅವರನ್ನು ಶಾಂತಿ ಮಾತುಕತೆಗೆ ಆಹ್ವಾನಿಸಿದ್ದಾರೆ. 

ಇದೇ ವೇಳೆ ಕೋವಿಡ್-19 ಸಾಂಕ್ರಾಮಿಕದ ವಿರುದ್ಧ ಹೋರಾಡುತ್ತಿರುವ ಕೋವಿಡ್-19 ಯೋಧರಿಗೆ ಹಿಮಂತ ಬಿಸ್ವ ಶರ್ಮ  ಕೃತಜ್ಞತೆ ಸಲ್ಲಿಸಿದ್ದಾರೆ. 

75 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಾತನಾಡಿರುವ ಅವರು, ಅಸ್ಸಾಂ ಈ ಬಾರಿ ದಶಕಗಳಲ್ಲೇ ಮೊದಲ ಬಾರಿಗೆ ಸ್ವಾತಂತ್ರ್ಯ ದಿನಾಚರಣೆಯನ್ನು ಯುಎಲ್ಎಫ್ಎ ಸೇರಿದಂತೆ ಯಾವುದೇ ಉಗ್ರ ಸಂಘಟನೆಯ ಪ್ರತಿಭಟನೆ ಇಲ್ಲದೇ ನಡೆಸುತ್ತಿದೆ. ಅಸ್ಸಾಂ ನ ಜನತೆಯ ಪರವಾಗಿ, ಯುಎಲ್ಎಫ್ಎ-ಐ ನ ಮುಖ್ಯಸ್ಥ ಪರೇಶ್ ಬರುವಾ ಅವರನ್ನು ಮಾತುಕತೆಗೆ ಆಹ್ವಾನಿಸುತ್ತಿದ್ದೇನೆ. ನಮ್ಮ ರಾಜ್ಯದ ಯಾವುದೇ ಯುವಕನೂ ಹತ್ಯೆಗೀಡಾಗಬಾರದು ಎಂದು ಅವರು ಕರೆ ನೀಡಿದ್ದಾರೆ. 

ಪ್ರತಿ ವರ್ಷದ ಗಣರಾಜ್ಯ ದಿನಾಚರಣೆ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಅಸ್ಸಾಂ ಬಂದ್ ಗೆ ಕರೆ ನೀಡುತ್ತಿದ್ದ ಯುಎಲ್ಎಫ್ಎ-ಐ ಈ ಬಾರಿ ದಶಕಗಳಲ್ಲೇ ಮೊದಲ ಬಾರಿಗೆ ಬಂದ್ ಗೆ ಕರೆ ನೀಡಿರಲಿಲ್ಲ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT