ಸ್ವಾತಂತ್ರೋತ್ಸವ ಸಂಭ್ರಮ: ಪಾಕ್ ಸೈನಿಕರ ಜೊತೆ ಸಿಹಿ ಹಂಚಿಕೊಂಡ ಬಿಎಸ್ ಎಫ್ ಯೋಧರು
ಸ್ವಾತಂತ್ರೋತ್ಸವ ಅಂಗವಾಗಿ ಜಮ್ಮು-ಕಾಶ್ಮೀರದ ಅಟಾರಿ- ವಾಘಾ ಗಡಿಯಲ್ಲಿ ಪಾಕಿಸ್ತಾನದ ರೇಂಜರ್ ಗಳೊಂದಿಗೆ ಭಾರತೀಯ ಗಡಿ ಭದ್ರತಾ ಪಡೆ ಭಾನುವಾರ ಸಿಹಿ ಹಂಚಿಕೊಂಡರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಮ್ಮು-ಕಾಶ್ಮೀರ: ಸ್ವಾತಂತ್ರೋತ್ಸವ ಅಂಗವಾಗಿ ಜಮ್ಮು-ಕಾಶ್ಮೀರದ ಅಟಾರಿ- ವಾಘಾ ಗಡಿಯಲ್ಲಿ ಪಾಕಿಸ್ತಾನದ ರೇಂಜರ್ ಗಳೊಂದಿಗೆ ಭಾರತೀಯ ಗಡಿ ಭದ್ರತಾ ಪಡೆ ಭಾನುವಾರ ಸಿಹಿ ಹಂಚಿಕೊಂಡರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಮ್ಮು- ಕಾಶ್ಮೀರ ಮತ್ತು ಪಂಜಾಬ್ ನ ಅಂತಾರಾಷ್ಟ್ರೀಯ ಗಡಿ ಮತ್ತು ಗಡಿ ನಿಯಂತ್ರಣ ರೇಖೆ ಬಳಿ ಭಾರತೀಯ ಗಡಿ ಭದ್ರತಾ ಪಡೆಯ ಯೋಧರು ನೆರೆಯ ಪಾಕಿಸ್ತಾನದ ಸೈನಿಕರಿಗೆ ಸಿಹಿ ಹಂಚಿದ್ದು, ಶುಭಾಶಯ ವಿನಿಮಯ ಮಾಡಿಕೊಂಡಿದ್ದಾರೆ.
ಅಟಾರಿ- ವಾಘಾ ಗಡಿಯಲ್ಲಿ ಪಾಕ್ ರೇಂಜರ್ಸ್ ನಿನ್ನೆ ಬಿಎಸ್ ಎಫ್ ಯೋಧರಿಗೆ ಸಿಹಿ ಹಂಚಿದ್ದರು. ಇದಕ್ಕೆ ಪ್ರತಿಯಾಗಿ ಭಾರತೀಯ ಗಡಿ ರಕ್ಷಣಾ ಪಡೆ ಯೋಧರು ಕೂಡಾ ಇಂದು ಪಾಕ್ ಸೈನಿಕರಿಗೆ ಸಿಹಿ ಹಂಚಿದ್ದಾರೆ. ಎರಡೂ ಕಡೆಯ ಭದ್ರತಾ ಸಿಬ್ಬಂದಿ ಪರಸ್ಪರ ಕೈಕುಲುಕಿ, ಶುಭ ಹಾರೈಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.