ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕೋವಿಡ್ ಸಾಂಕ್ರಾಮಿಕ: ಮಹಾರಾಷ್ಟ್ರದಲ್ಲಿ 4,797 ಹೊಸ ಸೋಂಕು ಪ್ರಕರಣಗಳು ಪತ್ತೆ, 130 ಸಾವು ವರದಿ

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ನಲುಗಿ ಹೋಗುತ್ತಿರುವ ಮಹಾರಾಷ್ಟ್ರದಲ್ಲಿ ಇಂದು 4 ಸಾವಿರಕ್ಕೂ ಅಧಿಕ ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 130 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

ಸಾಂದರ್ಭಿಕ ಚಿತ್ರ
Srinivasa Murthy VN
Updated On : 16 Aug 2021, 12:18 am

ಮುಂಬೈ: ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ನಲುಗಿ ಹೋಗುತ್ತಿರುವ ಮಹಾರಾಷ್ಟ್ರದಲ್ಲಿ ಇಂದು 4 ಸಾವಿರಕ್ಕೂ ಅಧಿಕ ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 130 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

ಈ ಕುರಿತಂತೆ ಮಹಾರಾಷ್ಟ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 5,787 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 63,92,660ಕ್ಕೆ ಏರಿಕೆಯಾಗಿದೆ. ಅಂತೆಯೇ ಇದೇ ಅವಧಿಯಲ್ಲಿ 130 ಮಂದಿ ಸೋಂಕಿತರು  ಸಾವನ್ನಪ್ಪಿದ್ದು, ಆ ಮೂಲಕ ಒಟ್ಟಾರೆ ಸಾವಿನ ಸಂಖ್ಯೆ 1,35,039ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ 3,710 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಒಟ್ಟಾರೆ ಗುಣಮುಖರ ಸಂಖ್ಯೆ 61,89,933ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಮಹಾರಾಷ್ಟ್ರದಲ್ಲಿ 64,219 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದುಬಂದಿದೆ.
 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement