ದೇಶ

ಬಾಲಕಿಯರಿಗೂ ಇನ್ನು ಮುಂದೆ ಸೈನಿಕ ಶಾಲೆಗಳಲ್ಲಿ ಪ್ರವೇಶ: ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಪ್ರಧಾನಿ ಮೋದಿ ಘೋಷಣೆ

Srinivas Rao BV

ನವದೆಹಲಿ: 75 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಸೈನಿಕ ಶಾಲೆಗಳಲ್ಲಿ ಇನ್ನು ಮುಂದೆ ಯುವತಿಯರಿಗೂ ಪ್ರವೇಶವನ್ನು ಘೋಷಿಸಿದ್ದಾರೆ. 

ಪ್ರಸ್ತುತ 33 ಸೈನಿಕ ಶಾಲೆಗಳು ದೇಶಾದ್ಯಂತ ಕಾರ್ಯನಿರ್ವಹಿಸುತ್ತಿವೆ. ಮಿಜೊರಾಮ್ ನಲ್ಲಿ ಎರಡುವರೆ ವರ್ಷಗಳ ಹಿಂದೆ ಸೈನಿಕ ಶಾಲೆಗಳಲ್ಲಿ ಬಾಲಕಿ/ಯರಿಗೆ ಪ್ರವೇಶ ನೀಡುವ ಪ್ರಥಮ ಪ್ರಯೋಗವನ್ನು ನಡೆಸಲಾಗಿತ್ತು ಎಂಬುದನ್ನು ಉಲ್ಲೇಖಿಸಿರುವ ಪ್ರಧಾನಿ ಮೋದಿ, ಈಗ ಭಾರತ ಸರ್ಕಾರ ಎಲ್ಲಾ ಸೈನಿಕ ಶಾಲೆಗಳಲ್ಲಿಯೂ ಬಾಲಕಿ/ಯುವತಿಯರಿಗೆ ಪ್ರವೇಶ ಲಭ್ಯವಿರಲಿದೆ ಎಂದು ಹೇಳಿದ್ದಾರೆ. 

ಸೈನಿಕ ಶಾಲೆಗಳ ಸೊಸೈಟಿ ಸೈನಿಕ ಶಾಲೆಗಳನ್ನು ನಡೆಸುತ್ತಿದ್ದು ಆಡಳಿತಾತ್ಮಕ ನಿಯಂತ್ರಣ ರಕ್ಷಣಾ ಸಚಿವಾಲಯದ್ದಾಗಿದೆ.  ಭಾರತೀಯ ಸಶಸ್ತ್ರ ಪಡೆಗಳಿಗೆ ಸೇರ್ಪಡೆಯಾಗುವುದಕ್ಕೆ ಬಾಲ್ಯದಿಂದಲೇ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಉದ್ದೇಶದಿಂದ ಸೈನಿಕ ಶಾಲೆಗಳನ್ನು ಸ್ಥಾಪಿಸಲಾಗಿದೆ. 

SCROLL FOR NEXT