ಸುಷ್ಮಿತಾ ದೇವ್ 
ದೇಶ

ಪಕ್ಷ ತೊರೆದ ಕಾಂಗ್ರೆಸ್ ಮಾಜಿ ಸಂಸದೆ ಸುಷ್ಮಿತಾ ದೇವ್; ಸೋನಿಯಾ ಗಾಂಧಿಗೆ ರಾಜೀನಾಮೆ ಪತ್ರ ಸಲ್ಲಿಕೆ

ಕಾಂಗ್ರೆಸ್ ಮಾಜಿ ಸಂಸದೆ ಸುಷ್ಮಿತಾ ದೇವ್ ಅವರು ಪಕ್ಷವನ್ನು ತೊರೆದಿದ್ದು, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆಂದು ಸೋಮವಾರ ತಿಳಿದುಬಂದಿದೆ.

ನವದೆಹಲಿ: ಕಾಂಗ್ರೆಸ್ ಮಾಜಿ ಸಂಸದೆ ಸುಷ್ಮಿತಾ ದೇವ್ ಅವರು ಪಕ್ಷವನ್ನು ತೊರೆದಿದ್ದು, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆಂದು ಸೋಮವಾರ ತಿಳಿದುಬಂದಿದೆ.

ಈ ನಡುವೆ ಸುಷ್ಮಿತಾ ದೇವ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರೊಫೈಲ್ ಬದಲಿಸಿದ್ದು, ಕಾಂಗ್ರೆಸ್'ನ ಮಾಜಿ ಸದಸ್ಯೆ ಎಂದು ಹಾಕಿಕೊಂಡಿದ್ದಾರೆ. 

ಮೂರು ದಶಕಗಳ ಕಾಲ ಕಾಂಗ್ರೆಸ್​​ ಪಕ್ಷಕ್ಕೆ ದುಡಿದಿದ್ದ ಸುಷ್ಮಿತಾ ದೇವ್ ಅವರು, ಕಾಂಗ್ರೆಸ್​​ ಪಕ್ಷ ತೊರೆದಿರುವುದಕ್ಕೆ ಕಾರಣವೇನು ಎಂಬುದು ತಿಳಿದುಬಂದಿಲ್ಲ. ನಿನ್ನೆಯಷ್ಟೇ ಟ್ವೀಟ್ ಮಾಡಿದ್ದ ಸುಷ್ಮಿತಾ ಅವರು, ಸಾರ್ವಜನಿಕ ಸೇವೆಯಲ್ಲಿ ಹೊಸ ಅಧ್ಯಾಯ ಆರಂಭಿಸುತ್ತಿರುವುದಾಗಿ ಹೇಳಿದ್ದರು.

48 ವರ್ಷದ ಸುಷ್ಮಿತಾ ದೇವ್ ಈ ಹಿಂದೆ ಅಖಿಲ ಭಾರತ ಮಹಿಳಾ ಕಾಂಗ್ರೆಸ್​ ಅಧ್ಯಕ್ಷೆಯಾಗಿದ್ದರು. ಸುಷ್ಮಿತಾ ದೇವ್ ಅವರ ತಂದೆ ಸಂತೋಷ್​ ಮೋಹನ್ ದೇವ್​ ಈ ಹಿಂದೆ ಕೇಂದ್ರ ಮಂತ್ರಿಮಂಡಲದಲ್ಲಿ ಸಚಿವರಾಗಿದ್ದರು. ಮತ್ತು ತಾಯಿ ಬಿತಿಕಾ ದೇವ್​ ಅವರು ಅಸ್ಸಾಂನಲ್ಲಿ ಶಾಸಕಿಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್; ನದಿ ಪಾತ್ರದಲ್ಲಿ ಕಟ್ಟೆಚ್ಚರ