ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ 
ದೇಶ

ಕಾಂಗ್ರೆಸ್ 'ನೋಡಿಯೂ ನೋಡದಂತೆ' ಮುಂದೆ ಸಾಗುತ್ತದೆ: ಪಕ್ಷಕ್ಕೆ ಸುಷ್ಮಿತಾ ದೇವ್ ರಾಜೀನಾಮೆ ಕುರಿತು ಕಪಿಲ್ ಸಿಬಾಲ್!

ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸುಷ್ಮಿತಾ ದೇವ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸೋಮವಾರ ಪ್ರತಿಕ್ರಿಯಿಸಿರುವ ಹಿರಿಯ ಮುಖಂಡ ಕಪಿಲ್ ಸಿಬಾಲ್, ಕಾಂಗ್ರೆಸ್ ನೋಡಿಯೂ ನೋಡದಂತೆ ಮುಂದೆ ಸಾಗುತ್ತದೆ ಎಂದು ಹೇಳಿದ್ದಾರೆ.

ನವದೆಹಲಿ: ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸುಷ್ಮಿತಾ ದೇವ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸೋಮವಾರ ಪ್ರತಿಕ್ರಿಯಿಸಿರುವ ಹಿರಿಯ ಮುಖಂಡ ಕಪಿಲ್ ಸಿಬಾಲ್, ಕಾಂಗ್ರೆಸ್ ನೋಡಿಯೂ ನೋಡದಂತೆ ಮುಂದೆ ಸಾಗುತ್ತದೆ ಎಂದು ಹೇಳಿದ್ದಾರೆ. ಪಕ್ಷವನ್ನು ಬಲಪಡಿಸಲು ಪ್ರಯತ್ನಿಸಿ ಹಿರಿಯರು ದೂಷಣೆಗೆ ಒಳಗಾಗಿರುವಾಗ ಯುವ ಮುಖಂಡರು ಪಕ್ಷ ತೊರೆಯುತ್ತಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ. 

ಪಕ್ಷವನ್ನು ಬಲಪಡಿಸಲು ಪುನರ್ ರಚಿಸಬೇಕಾಗಿದೆ ಎಂಬ ಬೇಡಿಕೆಯಿಟ್ಟು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದ ಗ್ರೂಪ್ 23 ಮುಖಂಡರಲ್ಲಿ ಸಿಬಾಲ್ ಕೂಡಾ ಓರ್ವ ಸದಸ್ಯರಾಗಿದ್ದಾರೆ. ಸಮಾನ ಮನಸ್ಕ ರಾಜಕೀಯ ಪಕ್ಷಗಳ ಜೊತೆಗೂಡುವ ಸೋನಿಯಾ ಗಾಂಧಿ ಅವರ ಯೋಚನೆಯನ್ನು ಕಪಿಲ್ ಸಿಬಲ್ ಸ್ವಾಗತಿಸಿದ್ದಾರೆ. ಆದರೆ, ತನ್ನ ಸ್ವಂತ ಪಕ್ಷವನ್ನು ಬಲಪಡಿಸಬೇಕಾಗಿದೆ. ಇಲ್ಲದಿದ್ದರೆ ಪ್ರತಿಪಕ್ಷಗಳ ಒಗ್ಗಟ್ಟು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.  

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರತಿಪಕ್ಷಗಳಲ್ಲಿ ಒಗ್ಗಟ್ಟನ್ನು ತರಲು ಮುಂದಾಗಿರುವುದಕ್ಕೆ ನನಗೆ ಸಂತೋಷವಾಗಿದೆ. ಆದರೆ, ತಮ್ಮ ಸ್ವಂತ ಪಕ್ಷವನ್ನು ಬಲಪಡಿಸಬೇಕಾಗಿದೆ ಎಂದು ಅವರು ಹೇಳಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.  ಕಾಂಗ್ರೆಸ್ ಪಕ್ಷವನ್ನು ಪುನರ್ ಸಂಘಟಿಸುವ ಪ್ರಯತ್ನಕ್ಕೆ  ಪಕ್ಷದ ಸಹೋದ್ಯೋಗಿಗಳು ಬೆಂಬಲ ನೀಡಲು ಸಿದ್ಧವಿರುವುದಾಗಿ ಅವರು ತಿಳಿಸಿದ್ದಾರೆ. 

ಇದು ನನ್ನ ಬಗ್ಗೆ ಅಲ್ಲ, ಆದರೆ ಕಾಂಗ್ರೆಸ್‌ನ ಪುನರುಜ್ಜೀವನದ ಬಗ್ಗೆ ಮತ್ತು  ಪ್ರತಿಪಕ್ಷಗಳ ಒಗ್ಗಟ್ಟು ತರುವಲ್ಲಿ ಅದನ್ನು ಮುಂಚೂಣಿಗೆ ತರುವ ಬಗ್ಗೆ ಕಾಂಗ್ರೆಸ್ ನನ್ನು ಬಲಿಷ್ಠಗೊಳಿಸದಿದ್ದರೆ, ಪ್ರತಿಪಕ್ಷಗಳಲ್ಲಿ ಒಗ್ಗಟ್ಟು ತರಲು ಸಾಧ್ಯವಿಲ್ಲ ಎಂದು ಸಿಬಲ್ ಹೇಳಿದ್ದಾರೆ. ಕಾಂಗ್ರೆಸ್ ನ್ನು ಬಲಪಡಿಸದಿದ್ದರೆ, ಪುನರ್ ಸಂಘಟಿಸದಿದ್ದರೆ, ಪ್ರತಿಪಕ್ಷಗಳಲ್ಲಿ ಒಗ್ಗಟ್ಟು ತರುವ ಯೋಜನೆಯೂ ವಿಫಲವಾಗುತ್ತದೆ.  ಕಾಂಗ್ರೆಸ್ ತನ್ನ ಪ್ರಾಮುಖ್ಯತೆಯ ಮಹತ್ವವನ್ನು ಅರಿತುಕೊಳ್ಳುತ್ತದೆ ಎಂದು ಭಾವಿಸಿರುವುದಾಗಿ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel