ಸಾಂದರ್ಭಿಕ ಚಿತ್ರ 
ದೇಶ

ಬೇಲ್ ಮೇಲೆ ಹೊರಬಂದಿದ್ದ ವ್ಯಕ್ತಿಯಿಂದ ಪತ್ನಿಯ ಕೊಲೆ: ಮೂವರು ಅಧಿಕಾರಿಗಳು ಅಮಾನತು

ಆರೋಪಿ ನಂದಾ ನಾಯಕ್ ಎಂಬಾತನ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಆತನ ಪತ್ನಿಯೇ ಪ್ರಮುಖ ಸಾಕ್ಷಿಯಾಗಿದ್ದಳು. ಬೇಲ್ ಪಡೆದು ಹೊರಬಂದ ನಂದಾ ತನ್ನ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹಿಂಪಡೆಯುವಂತೆ ಪತ್ನಿಯ ಮೇಲೆ ಒತ್ತಡ ಹಾಕಿದ್ದ.

ನವದೆಹಲಿ: ಬೇಲ್ ಮೇಲೆ ಹೊರಬಂದಿದ್ದ ವ್ಯಕ್ತಿಯೋರ್ವ ಪೊಲೀಸ್ ರಕ್ಷಣೆಯಲ್ಲಿದ್ದ ಪತ್ನಿಯನ್ನು ಪತ್ನಿ ಕೊಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿರುವುದಾಗಿ ದೆಹಲಿ ಪೊಲೀಸ್ ಇಲಾಖೆ ನ್ಯಾಯಾಲಯಕ್ಕೆ ತಿಳಿಸಿದೆ. 

ಅಮಾನತುಗೊಂಡ ಅಧಿಕಾರಿಗಳು ನಗರದ ಗೋವಿಂದ್ಪುರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರ ವಿರುದ್ಧ ವಿಭಾಗೀಯ ತನಿಖೆಗೆ ಆದೇಶ ಹೊರಡಿಸಲಾಗಿದೆ ಎಂಡು ತಿಳಿದುಬಂದಿದೆ. 

ಆರೋಪಿ ನಂದಾ ನಾಯಕ್ ಎಂಬಾತನ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಆತನ ಪತ್ನಿಯೇ ಪ್ರಮುಖ ಸಾಕ್ಷಿಯಾಗಿದ್ದಳು. ಆತ ಜೂನ್ ತಿಂಗಳಲ್ಲಿ ಬೇಲ್ ಪಡೆದು ಹೊರ ಬಂದಿದ್ದ. ಹೊರಬಂದವನು ತನ್ನ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹಿಂಪಡೆಯುವಂತೆ ಪತ್ನಿಯ ಮೇಲೆ ಒತ್ತಡ ಹಾಕಿದ್ದ. ಇದನ್ನು ಆಕೆ ನ್ಯಾಯಾಲಯದ ಗಮನಕ್ಕೆ ತಂದಿದ್ದಳು. 

ನ್ಯಾಯಾಲಯ ಆತನ ಬೇಲ್ ರದ್ದುಗೊಳಿಸಿ ಇನ್ನೆರಡು ದಿನಗಳಲ್ಲಿ ಪೊಲೀಸರಿಗೆ ಶರಣಾಗಲು ಸೂಚಿತ್ತು. ಅಲ್ಲದೆ ಆತನ ಪತ್ನಿ ಜಾರ್ನಾಗೆ ರಕ್ಷಣೆ ಒದಗಿಸುವಂತೆ ಆದೇಶ ಹೊರಡಿಸಿತ್ತು. ಅಷ್ಟರೊಳಗೆ ಆರೋಪಿ ಪತ್ನಿಯ ಸೆರಗಿನಿಂದಲೇ ಆಕೆಯ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಸಾಯಿಸಿದ್ದ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

'ನನ್ನ ಹಣೆಬರಹ ಎಲ್ಲಿದೆಯೋ, ಜನ ಎಲ್ಲಿ ಗೆಲ್ಲಿಸ್ತಾರೋ ನೋಡೋಣ: ನಮ್ಮ ಸಂಖ್ಯೆ ನೋಡಿ ಅಪಹಾಸ್ಯ ಮಾಡಿದ್ದಾರೆ, 2028 ರಲ್ಲಿ ಸರ್ಕಾರ ರಚಿಸ್ತಿವಿ'

ಲೋಕಭವನ -ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷ: ಮತ ಪತ್ರ ಬಳಕೆ ಮಸೂದೆಗೆ ರಾಜ್ಯಪಾಲರ ತಡೆ

ಆನೇಕಲ್‌ ಬಳಿ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣಕ್ಕೆ 943 ಕೋಟಿ ರೂ. ಟೆಂಡರ್: ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಪರ್ಯಾಯ ಸಮುಚ್ಚಯ !

SCROLL FOR NEXT