ಕರ್ನಾಟಕ ಹೈಕೋರ್ಟ್ 
ದೇಶ

ಸುಪ್ರೀಂ ಕೋರ್ಟ್ ಅನುಮೋದಿಸಿರುವ ಕರ್ನಾಟಕ ಹೈಕೋರ್ಟ್‌ನ ಖಾಯಂ ನ್ಯಾಯಾಧೀಶರ ಪಟ್ಟಿ ಇಲ್ಲಿದೆ!

ಕರ್ನಾಟಕ ಹೈಕೋರ್ಟ್‌ನ ಆರು ಹೆಚ್ಚುವರಿ ನ್ಯಾಯಾಧೀಶರನ್ನು ಖಾಯಂ ನ್ಯಾಯಾಧೀಶರನ್ನಾಗಿ ನೇಮಿಸುವ ಪ್ರಸ್ತಾವನೆಯನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಅನುಮೋದಿಸಿದೆ. 

ನವದೆಹಲಿ: ಕರ್ನಾಟಕ ಹೈಕೋರ್ಟ್‌ನ ಆರು ಹೆಚ್ಚುವರಿ ನ್ಯಾಯಾಧೀಶರನ್ನು ಖಾಯಂ ನ್ಯಾಯಾಧೀಶರನ್ನಾಗಿ ನೇಮಿಸುವ ಪ್ರಸ್ತಾವನೆಯನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಅನುಮೋದಿಸಿದೆ. 

ಆಗಸ್ಟ್ 17, 2021ರಂದು ನಡೆದ ಸಭೆಯಲ್ಲಿ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ಕೊಲಿಜಿಯಂ ಪ್ರಸ್ತಾವನೆಯನ್ನು ಒಪ್ಪಿಕೊಂಡಿದೆ. ಅಲ್ಲದೆ ಪ್ರಕಟಣೆಯನ್ನು ಗುರುವಾರ ಸುಪ್ರೀಂ ಕೋರ್ಟ್ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ.

ಖಾಯಂ ನ್ಯಾಯಾಧೀಶರ ಪಟ್ಟಿ: ನ್ಯಾಯಮೂರ್ತಿಗಳಾದ ನೇರನಹಳ್ಳಿ ಶ್ರೀನಿವಾಸನ್, ಸಂಜಯ್ ಗೌಡ, ಜ್ಯೋತಿ ಮೂಲಿಮನಿ, ನಟರಾಜ್ ರಂಗಸ್ವಾಮಿ, ಹೇಮಂತ್ ಚಂದನಗೌಡರ್, ಪ್ರದೀಪ್ ಸಿಂಗ್ ಯೆರೂರ್ ಮತ್ತು ಮಹೇಶನ್ ನಾಗಪ್ರಸನ್ನ.

ಇದೇ ವೇಳೆ ಕೋಲ್ಕತ್ತಾ ಹೈಕೋರ್ಟ್‌ ಗೆ ನ್ಯಾಯಮೂರ್ತಿ ಕೌಶಿಕ್ ಚಂದಾ ಅವರನ್ನು ಖಾಯಂ ನ್ಯಾಯಾಧೀಶರನ್ನಾಗಿ ನೇಮಿಸುವ ಪ್ರಸ್ತಾವನೆಯನ್ನು ಕೊಲಿಜಿಯಂ ಅನುಮೋದಿಸಿದೆ. 

ನ್ಯಾಯಮೂರ್ತಿ ರಮಣ ಹಾಗೂ ನ್ಯಾಯಮೂರ್ತಿಗಳಾದ ಯುಯು ಲಲಿತ್ ಮತ್ತು ಎಎಂ ಖಾನ್ವಿಲ್ಕರ್ ಅವರು ಹೈಕೋರ್ಟ್ ನ್ಯಾಯಾಧೀಶರಿಗೆ ಸಂಬಂಧಿಸಿದಂತೆ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂರು ಸದಸ್ಯರ ಕೊಲಿಜಿಯಂನ ಭಾಗವಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT