ಪ್ರಧಾನಿ ಮೋದಿ 
ದೇಶ

ಬುಲ್ಗಾನಾ ಟಿಪ್ಪರ್ ಟ್ರಕ್ ಅಪಘಾತ: ಸಂತ್ರಸ್ಥರಿಗೆ ಪ್ರಧಾನಿ ಮೋದಿ ಪರಿಹಾರ ಘೋಷಣೆ

ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಬುಲ್ದಾನದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಸ್ಥರಿದೆ ತಲಾ 2 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ.

ನವದೆಹಲಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಬುಲ್ದಾನದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಸ್ಥರಿದೆ ತಲಾ 2 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಅವರು, ಬುಲ್ಧಾನಾ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಯಿಂದಾಗಿ ತೀವ್ರ ನೋವಾಗಿದೆ. ದುಃಖಿತ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಬೇಗ ಗುಣಮುಖರಾಗಲಿ ಎಂದು ಟ್ವೀಟ್ ಮಾಡಿದ್ದಾರೆ.

ಅಂತೆಯೇ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂ ಗಳನ್ನು ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

ಇನ್ನು ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಬುಲ್ದಾನದಲ್ಲಿ ಈ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ಕಂದಕಕ್ಕೆ ಉರುಳಿದೆ. ಈ ವೇಳೆ ಟ್ರಕ್ ನಲ್ಲಿದ್ದವರ ಪೈಕಿ 13 ಮಂದಿ ಸಾವನ್ನಪ್ಪಿದ್ದು, ಆಸ್ಪತ್ರೆಗೆ ದಾಖಲಾಗಿರುವ ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಗಾಯಾಳುಗಳಿಗೆ ಜಲ್ನಾ  ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 

ಪ್ರತ್ಯಕ್ಷದರ್ಶಿಗಳು ಹೇಳಿರುವಂತೆ ಟ್ರಕ್ ನಲ್ಲಿ ಸುಮಾರು 16 ಮಂದಿ ಪ್ರಯಾಣಿಕರು ಇದ್ದರು. ಎಲ್ಲರೂ ದಿನಗೂಲಿ ನೌಕರರಾಗಿದ್ದರು. ಕೆಲಸ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಸಾವಿಗೀಡಾದವರ ಮೃತದೇಹಗಳನ್ನು ಕುಟುಂಬಸ್ಥರಿಗೆ ತಲುಪಿಸುವ ಕಾರ್ಯ ಮಾಡಲಾಗುತ್ತಿದೆ. ಇದಕ್ಕಾಗಿ  ಕೋರೆಗಾಂವ್ ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಬುಲ್ದಾನಾ ಜಿಲ್ಲಾಧಇಕಾರಿ ಎಸ್ ರಾಮಮೂರ್ತಿ ತಿಳಿಸಿದ್ದಾರೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT