ಅಮರೀಂದರ್ ಸಿಂಗ್ - ಸಿಧು ಭೇಟಿ 
ದೇಶ

ಪಂಜಾಬ್ ಸಿಎಂ ಅಮರೀಂದರ್ ಸಿಂಗ್- ಸಿಧು ಭೇಟಿ, ವಿಧಾನಸಭೆ ಚುನಾವಣೆಗೂ ಮುನ್ನ ಸಮನ್ವಯ ಸಮಿತಿ ರಚನೆ

ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರು ಶುಕ್ರವಾರ ಭೇಟಿ ಮಾಡಿದ್ದು, ಆಡಳಿತಾರೂಢ ಪಕ್ಷ ಮತ್ತು ರಾಜ್ಯ ಸರ್ಕಾರದ ನಡುವೆ ಉತ್ತಮ....

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರು ಶುಕ್ರವಾರ ಭೇಟಿ ಮಾಡಿದ್ದು, ಆಡಳಿತಾರೂಢ ಪಕ್ಷ ಮತ್ತು ರಾಜ್ಯ ಸರ್ಕಾರದ ನಡುವೆ ಉತ್ತಮ ಸಮನ್ವಯಕ್ಕಾಗಿ 10 ಸದಸ್ಯರ 'ಸ್ಟ್ರಾಟೆಜಿಕ್ ಪಾಲಿಸಿ ಗ್ರೂಪ್' ರಚಿಸಲು ಒಪ್ಪಿಕೊಂಡಿದ್ದಾರೆ.

ನಿರ್ಣಾಯಕ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಪಕ್ಷ ಮತ್ತು ಸರ್ಕಾರದ ನಡುವೆ ಸಮನ್ವಯ ಸಾಧಿಸಲು, ಸಾರ್ವಜನಿಕ ಕುಂದುಕೊರತೆಗಳನ್ನು ಪರಿಹರಿಸಲು ಎಲ್ಲಾ ಸಚಿವರು ಪ್ರತಿದಿನವೂ ಪಂಜಾಬ್ ಕಾಂಗ್ರೆಸ್ ಭವನದಲ್ಲಿ ಲಭ್ಯವಿರಬೇಕು ಎಂದು ಸಿಎಂ ಹೇಳಿದ್ದಾರೆ.

ಕಾಂಗ್ರೆಸ್ ಭವನದಲ್ಲಿ ತಲಾ ಒಬ್ಬ ಸಚಿವರು ಸೋಮವಾರದಿಂದ ಮೂರು ಗಂಟೆಗಳ ಕಾಲ(ಬೆಳಗ್ಗೆ 11 ರಿಂದ ಮಧ್ಯಾಹ್ನ 2) ಲಭ್ಯವಿರುತ್ತಾರೆ. ಒಂದು ವೇಳೆ, ಸಚಿವರಿಗೆ ಅದನ್ನು ಮಾಡಲು ಸಾಧ್ಯವಾಗದಿದ್ದರೆ, ಅವರು ಬದಲಿ ವ್ಯವಸ್ಥೆ ಮಾಡಬೇಕಾಗುತ್ತದೆ. ಸೋಮವಾರದಿಂದ ಶುಕ್ರವಾರದವರೆಗೆ ವಾರದಲ್ಲಿ ಐದು ದಿನಗಳವರೆಗೆ ಈ ವ್ಯವಸ್ಥೆ ಇರುತ್ತದೆ ಎಂದು ಅಮರೀಂದರ್ ಸಿಂಗ್ ತಿಳಿಸಿದ್ದಾರೆ.

ಇದು 2022ರ ವಿಧಾನಸಭೆ ಚುನಾವಣೆಗೆ ಮುನ್ನ ತನ್ನ ಸರ್ಕಾರ ಮತ್ತು ಪಕ್ಷದ ಕಾರ್ಯಕರ್ತರ ನಡುವೆ ಉತ್ತಮ ಸಮನ್ವಯಕ್ಕೆ ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.

ನವಜೋತ್ ಸಿಂಗ್ ಸಿಧು, ಕೆಪಿಸಿಸಿ ಕಾರ್ಯಾಧ್ಯಕ್ಷ ಕುಲ್ಜಿತ್ ಸಿಂಗ್ ನಾಗ್ರಾ ಮತ್ತು ಹೊಸದಾಗಿ ನೇಮಕಗೊಂಡ ಪ್ರಧಾನ ಕಾರ್ಯದರ್ಶಿ ಪರ್ಗತ್ ಸಿಂಗ್ ಅವರು ಅಮರೀಂದರ್‌ ಸಿಂಗ್ ಅವರನ್ನು ಭೇಟಿ ಮಾಡಿ ಪಕ್ಷ-ಸರ್ಕಾರದ ಸಮನ್ವಯವನ್ನು ಬಲಪಡಿಸುವ ಕ್ರಮಗಳ ಕುರಿತು ಚರ್ಚಿಸಿದರು. ಸಿಧು ಅವರು ಪಕ್ಷದ ಅಧ್ಯಕ್ಷರಾದ ನಂತರ ಇದು ಅವರ ಎರಡನೇ ಭೇಟಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್