ಭಾರತೀಯ ವಾಯುಪಡೆ ವಿಮಾನ 
ದೇಶ

85 ಭಾರತೀಯರನ್ನು ಹೊತ್ತ ಐಎಎಫ್ ವಿಮಾನ ಕಾಬೂಲ್ ನಿಂದ ಪ್ರಯಾಣ

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನ್ನು ತಾಲಿಬಾನ್ ವಶಕ್ಕೆ ಪಡೆದ ನಂತರ ಅಲ್ಲಿರುವ ಭಾರತೀಯರನ್ನು ಸ್ಥಳಾಂತರಿಸಲು ಪ್ರಯತ್ನಿಸಲಾಗುತ್ತಿದ್ದು, 85 ಭಾರತೀಯರನ್ನು ಹೊತ್ತ ಭಾರತೀಯ ವಾಯುಪಡೆಯ ಸಿ-130 ಜೆ ವಿಮಾನ ಶನಿವಾರ ಬೆಳಗ್ಗೆ ಕಾಬೂಲ್ ನಿಂದ ಪ್ರಯಾಣ ಆರಂಭಿಸಿದೆ.

ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನ್ನು ತಾಲಿಬಾನ್ ವಶಕ್ಕೆ ಪಡೆದ ನಂತರ ಅಲ್ಲಿರುವ ಭಾರತೀಯರನ್ನು ಸ್ಥಳಾಂತರಿಸಲು ಪ್ರಯತ್ನಿಸಲಾಗುತ್ತಿದ್ದು, 85 ಭಾರತೀಯರನ್ನು ಹೊತ್ತ ಭಾರತೀಯ ವಾಯುಪಡೆಯ ಸಿ-130 ಜೆ ವಿಮಾನ ಶನಿವಾರ ಬೆಳಗ್ಗೆ ಕಾಬೂಲ್ ನಿಂದ ಪ್ರಯಾಣ ಆರಂಭಿಸಿದೆ.

ಕಾಬೂಲ್ ನಿಂದ ಟೇಕಾಪ್ ಆದ ವಿಮಾನ ಇಂದನ ತುಂಬಿಸಿಕೊಳ್ಳುವ ಸಲುವಾಗಿ ತಜಕಿಸ್ತಾನ್ ನಲ್ಲಿ ಇಳಿದಿದೆ. ಕಾಬೂಲ್ ನಿಂದ ಭಾರತೀಯ ನಾಗರಿಕರನ್ನು ಸ್ಥಳಾಂತರಿಸಲು ಭಾರತೀಯ ಅಧಿಕಾರಿಗಳು ನೆರವಾಗುತ್ತಿದ್ದಾರೆ ಎಂದು ಮೂಲಗಳು ಹೇಳಿರುವುದಾಗಿ ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಸರ್ಕಾರ ಸಂಘಟಿತ  ಪ್ರಯತ್ನದೊಂದಿಗೆ ಭಾರತೀಯ ನಾಗರಿಕರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ವಾಪಸ್ ಕರೆತರುತ್ತಿದೆ. ಕಳೆದ ಸೋಮವಾರ ಕಾಬೂಲ್  ತಾಲಿಬಾನ್ ಉಗ್ರರ ವಶವಾದ ನಂತರ ಭಾರತೀಯ ವಾಯುಪಡೆಯ ಎರಡು ವಿಮಾನಗಳು ಅಮೆರಿಕ ಭದ್ರತಾ ಪಡೆಗಳಿಂದ ಕ್ಲಿಯರೆನ್ಸ್ ಪಡೆದು ಕೆಲ ಪತ್ರಕರ್ತರು, ಐಟಿಬಿಪಿ ಸಿಬ್ಬಂದಿ ಸೇರಿದಂತೆ 180 ಅಧಿಕಾರಿಗಳನ್ನು ಭಾರತಕ್ಕೆ ಕರೆತಂದಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT