ಉದ್ಧವ್ ಠಾಕ್ರೆ 
ದೇಶ

ಜನರ ವಿಶ್ವಾಸ ಗೆಲ್ಲಿ: ಪ್ರತಿಪಕ್ಷಗಳಿಗೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಒತ್ತಾಯ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಜನರ ವಿಶ್ವಾಸವನ್ನು ಗೆಲ್ಲುವಂತೆ ವಿರೋಧ ಪಕ್ಷಗಳಿಗೆ ಒತ್ತಾಯಿಸಿದ್ದಾರೆ ಮತ್ತು ಎಲ್ಲರೂ ಒಗ್ಗಟ್ಟಿನಿಂದ ಸದೃಢವಾಗಿರುವಂತೆ ಕರೆ ನೀಡಿದ್ದಾರೆ. 

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಜನರ ವಿಶ್ವಾಸವನ್ನು ಗೆಲ್ಲುವಂತೆ ವಿರೋಧ ಪಕ್ಷಗಳಿಗೆ ಒತ್ತಾಯಿಸಿದ್ದಾರೆ ಮತ್ತು ಎಲ್ಲರೂ ಒಗ್ಗಟ್ಟಿನಿಂದ ಸದೃಢವಾಗಿರುವಂತೆ ಕರೆ ನೀಡಿದ್ದಾರೆ. 

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಶುಕ್ರವಾರ ಕರೆದಿದ್ದ ಪ್ರತಿಪಕ್ಷಗಳ ನಾಯಕರ ವರ್ಚುವಲ್ ಸಭೆಯಲ್ಲಿ ಮಹಾರಾಷ್ಟ್ರ ಸಿಎಂ ಈ ಮನವಿಯನ್ನು ಮಾಡಿದರು ಎಂದು ಶಿವಸೇನಾ ನಾಯಕ ಸಂಜಯ್ ರೌತ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

"ಪ್ರತಿಪಕ್ಷಗಳು ಜನರ ವಿಶ್ವಾಸವನ್ನು ಗೆಲ್ಲಬೇಕು ಎಂದು ಸಭೆಯಲ್ಲಿ ಠಾಕ್ರೆ ಒತ್ತಿ ಹೇಳಿದರು". "ಇಂದಿನವರೆಗೂ ವಿರೋಧ ಪಕ್ಷಗಳಲ್ಲಿ ಅಧಿಕಾರದ ಲಾಲಸೆ ಇಲ್ಲ, ಆದರೆ ಅಧಿಕಾರವನ್ನು ಗಮನದಲ್ಲಿಟ್ಟುಕೊಂಡು ಪ್ರಬಲವಾಗಿ ಮತ್ತು ಒಗ್ಗಟ್ಟಿನಿಂದ ಇರುತ್ತಾರೆ ಎಂಬ ನಂಬಿಕೆಯೊಂದಿಗೆ ಜನರು ವಿರೋಧ ಪಕ್ಷಗಳನ್ನು ನಂಬುವಂತಾಗಬೇಕು" ಎಂದು ಠಾಕ್ರೆ ಹೇಳಿರುವುದಾಗಿ ರೌತ್ ತಿಳಿಸಿದ್ದಾರೆ.

ಸೋನಿಯಾ ಗಾಂಧಿ ವೈಯಕ್ತಿಕವಾಗಿ ಎಲ್ಲ ಪಕ್ಷಗಳ ನಾಯಕರಿಗೂ ಸಭೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ ಎಂದು ರೌತ್ ಹೇಳಿದರು.

ಸಭೆಯಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ನಾಲ್ಕು ಕಾಂಗ್ರೆಸ್ಸೇತರ ಮುಖ್ಯಮಂತ್ರಿಗಳಾದ ಟಿಎಂಸಿಯ ಮಮತಾ ಬ್ಯಾನರ್ಜಿ (ಡಿಎಂಕೆ)ಎಂ ಕೆ ಸ್ಟಾಲಿನ್ (ತಮಿಳುನಾಡು) ಮತ್ತು ಜೆಎಂಎಂನ ಹೇಮಂತ್ ಸೊರೆನ್ (ಜಾರ್ಖಂಡ್) ಮತ್ತು ಉದ್ಧವ್ ಠಾಕ್ರೆ ಸೇರಿದಂತೆ 19 ವಿರೋಧ ಪಕ್ಷಗಳ ನಾಯಕರು ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ