ಹಿರಿಯರಿಗೆ ಗೌರವ ಕೊಡಿ: ಅಣ್ಣ ತೇಜ್ ಪ್ರತಾಪ್ ಗೆ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಬುದ್ಧಿವಾದ!
ಹಿರಿಯರಿಗೆ ಗೌರವ ಕೊಡಬೇಕು ತೇಜ್ ಪ್ರತಾಪ್ ಯಾದವ್ ಶಿಸ್ತಿನಿಂದ ವರ್ತಿಸಬೇಕು ಎಂದು ರಾಷ್ಟ್ರೀಯ ಜನತಾದಳದ (ಆರ್ಜೆಡಿ) ನಾಯಕ ತೇಜಸ್ವಿ ಯಾದವ್ ಅಣ್ಣನಿಗೆ ಕಿವಿಮಾತು ಹೇಳಿದ್ದಾರೆ.
ಪಾಟ್ನಾ: ಹಿರಿಯರಿಗೆ ಗೌರವ ಕೊಡಬೇಕು ತೇಜ್ ಪ್ರತಾಪ್ ಯಾದವ್ ಶಿಸ್ತಿನಿಂದ ವರ್ತಿಸಬೇಕು ಎಂದು ರಾಷ್ಟ್ರೀಯ ಜನತಾದಳದ (ಆರ್ಜೆಡಿ) ನಾಯಕ ತೇಜಸ್ವಿ ಯಾದವ್ ಅಣ್ಣನಿಗೆ ಕಿವಿಮಾತು ಹೇಳಿದ್ದಾರೆ.
ನಮ್ಮದು ಶಿಸ್ತಿನ ಕುಟುಂಬ, ನಮ್ಮ ತಂದೆ ತಾಯಿ ಒಳ್ಳೆಯ ಸಂಸ್ಕೃತಿ ಮತ್ತು ಉತ್ತಮ ನಡವಳಿಕೆಯನ್ನು ಕಲಿಸಿಕೊಟ್ಟಿದ್ದಾರೆ, ತೇಜ್ ಪ್ರತಾಪ್ ಉತ್ತಮ ನಡವಳಿಕೆಯನ್ನು ರೂಢಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ತೇಜ್ ಪ್ರತಾಪ್ ವರ್ತನೆ ಬಗ್ಗೆ ತಂದೆ ಲಾಲು ಪ್ರಸಾದ್ ಯಾದವ್ ಹಾಗೂ ತಾಯಿ ರಾಬ್ಡಿ ದೇವಿ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ. ಇತ್ತೀಚೆಗೆ ತೇಜ್ ಪ್ರತಾಪ್ ರಾಷ್ಟ್ರೀಯ ಜನತಾ ದಳದ ಹಿರಿಯ ನಾಯಕ ಜಗದಾನಂದ ಸಿಂಗ್ ಅವರ ಜತೆ ಅನುಚಿತವಾಗಿ ವರ್ತಸಿದ್ದರು. ಅಣ್ಣನ ನಡೆಯ ಬಗ್ಗೆ ತೇಜಸ್ವಿ ಯಾದವ್ ಕೂಡ ಬೇಸರ ವ್ಯಕ್ತಪಡಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.