ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೋಲಿಯೊ ಲಸಿಕೆ ನೀಡುತ್ತಿರುವ ದೃಶ್ಯ 
ದೇಶ

ಅಫ್ಘಾನಿಸ್ತಾನದಿಂದ ಮರಳಿದವರಿಗೆ ಉಚಿತ ಪೋಲಿಯೊ ಲಸಿಕೆ: ಕೇಂದ್ರ ಸರ್ಕಾರ ನಿರ್ಧಾರ

ಜಗತ್ತಿನಲ್ಲಿ ಪೋಲಿಯೊ ಹಾವಳಿ ಇರುವ ದೇಶಗಳೆಂದರೆ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ. ಪೋಲಿಯೋ ಮುಕ್ತ ರಾಷ್ಟ್ರವಾಗಿರುವ ಭಾರತ ಇದೀಗ ಮುನ್ನೆಚ್ಚರಿಕಾ ದೃಷ್ಟಿಯಿಂದ ಅಫ್ಘಾನಿಸ್ತಾನದಿಂದ ಭಾರತಕ್ಕೆ ಮರಳಿದವರಿಗೆ ಉಚಿತ ಪೋಲಿಯೊ ಲಸಿಕೆ ನೀಡಲು ನಿರ್ಧರಿಸಿದೆ

ನವದೆಹಲಿ: ಅಫ್ಘಾನಿಸ್ತಾನದಿಂದ ಭಾರತಕ್ಕೆ ಮರಳಿದವರಿಗೆ ಉಚಿತ ಪೋಲಿಯೊ ಲಸಿಕೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಮಾಹಿತಿ ನೀಡಿದ್ದಾರೆ. ಈಗಾಗಲೇ ನವದೆಹಲಿಗೆ ಬಂದಿಳಿದ ಆಫ್ಘನ್ ವಾಪಸಾತಿಗಳಿಗೆ ಪೋಲಿಯೋ ಲಸಿಕೆ ನೀಡಲಾಗಿದೆ. ಅದರ ಫೋಟೋವನ್ನು ಸಚಿವ ಮನ್ಸುಖ್ ಹಂಚಿಕೊಂಡಿದ್ದಾರೆ. 

ಜಗತ್ತಿನಲ್ಲಿ ಪೋಲಿಯೊ ಹಾವಳಿ ಇರುವ ದೇಶಗಳೆಂದರೆ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ. ಪೋಲಿಯೋ ಮುಕ್ತ ರಾಷ್ಟ್ರವಾಗಿರುವ ಭಾರತ ಇದೀಗ ಮುನ್ನೆಚ್ಚರಿಕಾ ದೃಷ್ಟಿಯಿಂದ ಆಫ್ಘನ್ ವಾಪಸಾತಿಗಳಿಗೆ ಪೋಲಿಯೊ ಲಸಿಕೆಯಾದ ಒಪಿವಿ ಮತ್ತು ಎಫ್ ಐ ಪಿ ವಿ ಲಸಿಕೆ ನೀಡಿದ್ದಾರೆ. ಸಾರ್ವಜನಿಕ ಆರೋಗ್ಯ ಹಿತದ ದೃಷ್ಟಿಯಿಂದ ಈ ಮುನ್ನೆಚ್ಚರಿಕಾ ಕ್ರಮ ಕೈಗೊಂಡ ಆರೋಗ್ಯ ಸಿಬ್ಬಂದಿ ಕ್ರಮವನ್ನು ಸಚಿವರು ಶ್ಲಾಘಿಸಿದ್ದಾರೆ. 

ಭಾನುವಾರ ಭಾರತ 168 ಮಂದಿಯನ್ನು ಯುದ್ಧಗ್ರಸ್ತ ಅಫ್ಘಾನಿಸ್ತಾನದಿಂದ ಸ್ಥಳಾಂತರಿಸಿದೆ. ಅದಕ್ಕೂ ಮುನ್ನ ಭಾರತ 
ಕಾಬೂಲಿನ ತನ್ನ ದೂತವಾಸ ಸಿಬ್ಬಂದಿಯನ್ನು ಒಳಗೊಂಡಂತೆ ಒಟ್ಟು 200 ಮಂದಿಯನ್ನು ಸ್ಥಳಾಂತರ ಮಾಡಿತ್ತು. ನಂತರ ಎರಡನೇ ಸ್ಥಳಾಂತರ ಕಾರ್ಯಾಚರಣೆಯಲ್ಲಿ 150 ಮಂದಿಯನ್ನು ರಕ್ಷಣೆ ಮಾಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?