ದೇಶ

ಇಂಡೋ-ಪಾಕ್ ಗಡಿಯಲ್ಲಿ ಮತ್ತೆ ಶಂಕಿತ ಡ್ರೋನ್ ಹಾರಾಟ, ಗುಂಡು ಹಾರಿಸಿ ನೆಲಕ್ಕುರುಳಿಸಿದ ಬಿಎಸ್ ಎಫ್ ಯೋಧರು

Srinivasamurthy VN

ಜಮ್ಮು: ಭಾರತ-ಪಾಕಿಸ್ತಾನ ಗಡಿಯಲ್ಲಿ ಮತ್ತೆ ಶಂಕಿತ ಡ್ರೋನ್ ಹಾರಾಟ ಘಟನೆ ನಡೆದಿದ್ದು, ಕೂಡಲೇ ಎಚ್ಚೆತ್ತ ಬಿಎಸ್ ಎಫ್ ಯೋಧರು ಅದನ್ನು ಗುಂಡು ಹಾರಿಸಿ ನೆಲಕ್ಕುರುಳಿಸಿದ್ದಾರೆ.

ಜಮ್ಮು ಜಿಲ್ಲೆಯ ಅರ್ನಿಯಾ ಸೆಕ್ಟರ್‌ನ ಅಂತರರಾಷ್ಟ್ರೀಯ ಗಡಿಯಲ್ಲಿ ಸೋಮವಾರ ಬೆಳಿಗ್ಗೆ ಭಾರತದತ್ತ ಬರುತ್ತಿದ್ದ ಶಂಕಿತ ಹಾರುವ ವಸ್ತುವೊಂದನ್ನು ಗುರುತಿಸಿದ ಗಡಿ ಭದ್ರತಾ ಪಡೆಯ (ಬಿಎಸ್‌ಎಫ್‌) ಸಿಬ್ಬಂದಿ ಅದರತ್ತ ಗುಂಡು ಹಾರಿಸಿದ್ದು, ಅದು ಪಾಕಿಸ್ತಾನದತ್ತ ಬಿದ್ದಿದೆ.

‘ಬೆಳಿಗ್ಗೆ 5.30ರ ಸುಮಾರಿಗೆ ಆಗಸದಲ್ಲಿ ಕೆಂಪು ಮತ್ತು ಹಳದಿ ಬಣ್ಣದ ಬೆಳಕಿನ ಮಿಣುಕುತ್ತಿರುವುದು ಕಾಣಿಸಿತು. ತಕ್ಷಣ ಎಚ್ಚೆತ್ತ ಬಿಎಸ್‌ಎಫ್‌ ಸಿಬ್ಬಂದಿ ಅದರತ್ತ ಗುಂಡು ಹಾರಿಸಿದರು. ಹಾರುವ ವಸ್ತು ಬಳಿಕ ಪಾಕಿಸ್ತಾನದತ್ತ ಬಿದ್ದಿತು ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಹಾರಿದ ವಸ್ತು ಡ್ರೋನ್ ಇರಬಹುದು ಎಂಬ ಶಂಕೆ ಇದ್ದು, ಪೊಲೀಸರ ನೆರವಿನಿಂದ ಸ್ಥಳವನ್ನು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
 

SCROLL FOR NEXT