ತೇಜಸ್ವಿ ಯಾದವ್ 
ದೇಶ

ಪ್ರಾಣಿಗಳು, ಮರಗಳ ಎಣಿಕೆ ಮಾಡಬಹುದಾದರೆ ಜನ ಗಣತಿಯೂ ಆಗುತ್ತದೆ: ತೇಜಸ್ವಿ ಯಾದವ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ 10 ಪಕ್ಷಗಳ ನಿಯೋಗವು ರಾಷ್ಟ್ರವ್ಯಾಪಿ ಜಾತಿ ಆಧಾರಿತ ಜನಗಣತಿಗೆ ಬೆಂಬಲವಾಗಿ ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿತು. 

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ 10 ಪಕ್ಷಗಳ ನಿಯೋಗವು ರಾಷ್ಟ್ರವ್ಯಾಪಿ ಜಾತಿ ಆಧಾರಿತ ಜನಗಣತಿಗೆ ಬೆಂಬಲವಾಗಿ ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿತು. 
 
ನಿತೀಶ್ ಕುಮಾರ್ ಅವರೊಂದಿಗೆ ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ಸೇರಿದಂತೆ ಹಲವು ಪಕ್ಷಗಳ ಪ್ರತಿನಿಧಿಗಳು ಜಾತಿ ಆಧಾರಿತ ಜನಗಣತಿ ಒತ್ತಾಯಿಸಿದ್ದಾರೆ.

ಮೋದಿ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ, ಜಾತಿ ಆಧಾರಿತ ಜನಗಣತಿಗೆ ಪ್ರಧಾನಿ ಮೋದಿ ಅವರಿಗೆ ಮನವಿ ಸಲ್ಲಿಸಿದ್ದು ಅವರು ಅದನ್ನ ನಿರಾಕರಿಸಲಿಲ್ಲ ಎಂದು ಹೇಳಿದ್ದಾರೆ.

ಜಾತಿ ಆಧಾರಿತ ಜನಗಣತಿಯು ವಿವಿಧ ಅಭಿವೃದ್ಧಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ರೂಪಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.

ಬಡವರಿಗೆ ಸಹಾಯ ಮಾಡಲು ಜಾತಿ ಆಧಾರಿತ ಗಣತಿ ಬಹಳ ಪ್ರಯೋಜನಕಾರಿಯಾಗಿದೆ. ಮರಗಳು, ಪ್ರಾಣಿಗಳನ್ನು ಎಣಿಸಬಹುದಾದರೇ ಜನರ ಗಣತಿಯೂ ಸಾಧ್ಯ ಎಂದು ಆರ್ ಜೆಡ ಮುಖಂಡ ತೇಜಸ್ವಿ ಯಾದವ್ ಹೇಳಿದ್ದಾರೆ.

ಈ ವಿಚಾರದಲ್ಲಿ ಎರಡು ಪಕ್ಷಗಳು ಕೈಜೋಡಿಸುವುದರೊಂದಿಗೆ ನಿತೀಶ್ ಕುಮಾರ್ ಅವರ ಜೆಡಿಯು ಮತ್ತು ಆರ್‌ಜೆಡಿ ಹತ್ತಿರವಾಗುತ್ತಿವೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ  ತೇಜಸ್ವಿ ಯಾದವ್, ಬಿಹಾರದಲ್ಲಿ ಪ್ರತಿಪಕ್ಷಗಳು ಯಾವಾಗಲೂ ಜನಪರ ಕ್ರಮಗಳು ಮತ್ತು ರಾಷ್ಟ್ರೀಯ ಹಿತಾಸಕ್ತಿಗಾಗಿ ಸರ್ಕಾರವನ್ನು ಬೆಂಬಲಿಸುತ್ತಿವೆ ಎಂದು ಹೇಳಿದರು.

ನಿತೀಶ್ ಕುಮಾರ್ ಮತ್ತು ತೇಜಸ್ವಿ, ಜೆಡಿಯು ನಾಯಕ ವಿಜಯ್ ಕುಮಾರ್ ಚೌಧರಿ, ಮಾಜಿ ಮುಖ್ಯಮಂತ್ರಿ ಮತ್ತು ಹಿಂದುಸ್ತಾನಿ ಅವಾಮ್ ಮೋರ್ಚಾ (ಎಚ್ಎಎಂ) ಅಧ್ಯಕ್ಷ ಜಿತನ್ ರಾಮ್ ಮಾಂಜಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಅಜಿತ್ ಶರ್ಮಾ ಮತ್ತು ಬಿಜೆಪಿ ನಾಯಕ ಮತ್ತು ಬಿಹಾರ ಸಚಿವ ಜನಕ್ ರಾಮ್, ಸಿಪಿಐ-ಎಂಎಲ್ ಶಾಸಕಾಂಗ ಪಕ್ಷದ
ನಾಯಕ ಮಹಬೂಬ್ ಆಲಂ, ಎಐಎಂಐಎಂನ ಅಕ್ತರುಲ್ ಇಮಾಮ್, ವಿಐಪಿಯ ಮುಖೇಶ್ ಸಾಹ್ನಿ, ಸಿಪಿಐನ ಸೂರ್ಯಕಾಂತ್ ಪಾಸ್ವಾನ್ ಮತ್ತು ಸಿಪಿಎಂನ ಅಜಯ್ ಕುಮಾರ್ ನಿಯೋಗದಲ್ಲಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT