ಉತ್ತರ ಪ್ರದೇಶದ ಆರು ಜಿಲ್ಲೆಗಳ ರಸ್ತೆಗೆ ದಿವಂಗತ ಕಲ್ಯಾಣ್ ಸಿಂಗ್ ಹೆಸರು
ಲಕ್ನೋ ಮತ್ತು ಅಯೋಧ್ಯೆ ಸೇರಿದಂತೆ ಆರು ಜಿಲ್ಲೆಗಳಲ್ಲಿ ತಲಾ ಒಂದು ರಸ್ತೆಗೆ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಹೆಸರನ್ನು ಇಡಲಾಗುವುದು ಎಂದು ಉತ್ತ ಪ್ರದೇಶ ಸರ್ಕಾರ ಸೋಮವಾರ ಘೋಷಿಸಿದೆ.
ಲಕ್ನೋ: ಲಕ್ನೋ ಮತ್ತು ಅಯೋಧ್ಯೆ ಸೇರಿದಂತೆ ಆರು ಜಿಲ್ಲೆಗಳಲ್ಲಿ ತಲಾ ಒಂದು ರಸ್ತೆಗೆ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಹೆಸರನ್ನು ಇಡಲಾಗುವುದು ಎಂದು ಉತ್ತ ಪ್ರದೇಶ ಸರ್ಕಾರ ಸೋಮವಾರ ಘೋಷಿಸಿದೆ.
ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಇದಕ್ಕಾಗಿ ಪ್ರಸ್ತಾವನೆಯನ್ನು ಸಿದ್ಧಪಡಿಸಲಿದ್ದು, ಅಯೋಧ್ಯೆ, ಲಕ್ನೋ, ಅಲಿಗಡ, ಇಟಾಹ್, ಬುಲಂದ್ ಶಹರ್ ಮತ್ತು ಪ್ರಯಾಗರಾಜ್ ನಲ್ಲಿ ತಲಾ ಒಂದು ಪಿಡಬ್ಲ್ಯೂಡಿ ಮುಖ್ಯ ರಸ್ತೆಗೆ ಕಲ್ಯಾಣ್ ಸಿಂಗ್ ಹೆಸರಿಡಲಾಗುವುದು ಎಂದು ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಹೇಳಿದರು. ಪಿಡಬ್ಲ್ಯುಡಿ ಅಧಿಕಾರಿಗಳು ಶೀಘ್ರದಲ್ಲೇ ಈ ಕುರಿತು ಪ್ರಸ್ತಾವನೆ ಕಳುಹಿಸುತ್ತಾರೆ ಎಂದು ಅವರು ಹೇಳಿದರು.
ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಿಂಗ್ ಶನಿವಾರ ರಾತ್ರಿ ಇಲ್ಲಿನ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಿಧನರಾದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.