ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 57.15 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 57.15 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಹೇಳಿದೆ.

ಸಂಗ್ರಹ ಚಿತ್ರ
Manjula VN
Updated On : 24 Aug 2021, 1:14 pm

ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 57.15 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಹೇಳಿದೆ. 

ಈವರೆಗೆ ಕೇಂದ್ರವು ರಾಜ್ಯಗಳಿಗೆ 57.15 (57,15,22,580) ಕೋಟಿ ಪ್ರಮಾಣದಷ್ಟು ಲಸಿಕೆ ಪೂರೈಸಿದ್ದು, ಪ್ರಸ್ತುತ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಳಕೆಯಾಗದ ಒಟ್ಟು 3,29,58,715 ಕೋಟಿ ಡೋಸ್ ಕೋವಿಡ್ ಲಸಿಕೆಗಳಿವೆ ಎಂದು ಹೇಳಿದೆ.

ಮಂಗಳವಾರ ಲಭ್ಯವಿರುವ ಮಾಹಿತಿಯ ಪ್ರಕಾರ, ತ್ಯಾಜ್ಯಗಳು ಸೇರಿದಂತೆ ಒಟ್ಟು 58,89,97,805 ಪ್ರಮಾಣದಷ್ಟು ಲಸಿಕೆಗಳು ಬಳಕೆಯಾಗಿದೆ. ಇನ್ನು ಕೆಲವೇ ದಿನಗಳಲ್ಲಿ 1,00,84,700 ಡೋಸ್ ಲಸಿಕೆಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದೆ. 

Advertisement

Advertisement

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ 1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement