ಸಭೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ 
ದೇಶ

ಅಫ್ಘಾನಿಸ್ತಾನದಿಂದ ಭಾರತೀಯರ ಸ್ಥಳಾಂತರಕ್ಕೆ ಮೊದಲ ಆದ್ಯತೆ: ಜೈಶಂಕರ್

ಯುದ್ಧ ಪೀಡಿತ ಸನ್ನಿವೇಶ, ರಾಜಕೀಯಅನಿಶ್ಚಿತತೆ ಸೃಷ್ಟಿಯಾಗಿರುವ ಅಫ್ಘಾನಿಸ್ತಾನದಿಂದ ಭಾರತೀಯರನ್ನು ಸ್ಥಳಾಂತರಿಸುವುದು ಮೊದಲ ಆದ್ಯತೆಯಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ.

ನವದೆಹಲಿ: ಯುದ್ಧ ಪೀಡಿತ ಸನ್ನಿವೇಶ, ರಾಜಕೀಯಅನಿಶ್ಚಿತತೆ ಸೃಷ್ಟಿಯಾಗಿರುವ ಅಫ್ಘಾನಿಸ್ತಾನದಿಂದ ಭಾರತೀಯರನ್ನು ಸ್ಥಳಾಂತರಿಸುವುದು ಮೊದಲ ಆದ್ಯತೆಯಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ.

 ಅಫ್ಘಾನಿಸ್ತಾನದ ಬೆಳವಣಿಗೆಗಳ ಕುರಿತು  ವಿವಿಧ ರಾಜಕೀಯ ಪಕ್ಷಗಳ ಸಂಸದೀಯ ನಾಯಕರಿಗೆ ಮಾಹಿತಿ  ನೀಡಲು ಕರೆಯಲಾಗಿದ್ದ ಸಭೆಯಲ್ಲಿ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್, ಅಫ್ಘಾನಿಸ್ತಾನದಿಂದ ಸಾಧ್ಯವಾದಷ್ಟು ಜನರನ್ನು ಭಾರತಕ್ಕೆ ಕರೆತರಲು ಪ್ರಯತ್ನಿಸಲಾಗುತ್ತಿದೆ.  ಭಾರತೀಯ ಪ್ರಜೆಗಳ ಸ್ಥಳಾಂತರ ಮೊದಲ ಆದ್ಯತೆ ಎಂದರು.

ಯುದ್ಧ ಪೀಡಿತ ಅಫ್ಘಾನಿಸ್ತಾನದಲ್ಲಿ ಪರಿಸ್ಥಿತಿ ಗಂಭೀರವಾಗಿದೆ. ದೋಹಾ ಒಪ್ಪಂದದ ಸಂದರ್ಭದಲ್ಲಿ ನೀಡಿದ್ದ ಭರವಸೆಗಳನ್ನು ತಾಲಿಬಾನ್ ಉಲ್ಲಂಘಿಸಿದ್ದಾರೆ ಎಂದು ಅವರು ಹೇಳಿದರು.

ಕಳೆದ ವರ್ಷ ಫೆಬ್ರವರಿ ತಿಂಗಳಲ್ಲಿ ಅಮೆರಿಕ ಮತ್ತು ತಾಲಿಬಾನ್ ಮುಖಂಡರ ನಡುವಣ ನಡೆದ ದೋಹಾ ಶಾಂತಿ ಒಪ್ಪಂದದಲ್ಲಿ ಕಾಬೂಲ್ ಸರ್ಕಾರ ಅಫ್ಘಾನಿಸ್ತಾನದ ಎಲ್ಲಾ ವರ್ಗದ ಜನರನ್ನು ಪ್ರತಿನಿಧಿಸುವುದು,  ಧಾರ್ಮಿಕ ಸ್ವಾತಂತ್ರ ಹಾಗೂ ಪ್ರಜಾಪ್ರಭುತ್ವಕ್ಕೆ ಅವಕಾಶ ಕಲ್ಪಿಸುವುದು ಸೇರಿದಂತೆ ಮತ್ತಿತರ ಅನೇಕ ಭರವಸೆಗಳನ್ನು ನೀಡಲಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!