ಸಂಗ್ರಹ ಚಿತ್ರ 
ದೇಶ

ಅಸ್ಸಾಂನಲ್ಲಿ ಡಿಎನ್ಎಲ್ಎ ಉಗ್ರರ ದಾಳಿ, 5 ಮಂದಿ ಸಾವು, ಓರ್ವ ಗಂಭೀರ

ಅಸ್ಸಾಂನಲ್ಲಿ ದಿಮಾಸಾ ನ್ಯಾಷನಲ್ ಲಿಬರೇಷನ್ ಆರ್ಮಿ (ಡಿಎನ್ ಎಲ್ ಎ) ಉಗ್ರರು ನಡೆಸಿದ ದಾಳಿಯಲ್ಲಿ ಕನಿಷ್ಠ ಐದು ಮಂದಿ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಗುವಾಹತಿ: ಅಸ್ಸಾಂನಲ್ಲಿ ದಿಮಾಸಾ ನ್ಯಾಷನಲ್ ಲಿಬರೇಷನ್ ಆರ್ಮಿ (ಡಿಎನ್ ಎಲ್ ಎ) ಉಗ್ರರು ನಡೆಸಿದ ದಾಳಿಯಲ್ಲಿ ಕನಿಷ್ಠ ಐದು ಮಂದಿ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ನಿನ್ನೆ ತಡರಾತ್ರಿಯಲ್ಲಿ ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯಲ್ಲಿ ಈ ದಾಳಿ ನಡೆದಿದ್ದು, ಹಲವು ಟ್ರಕ್ ಗಳ ಮೇಲೆ ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ಐವರು ಸಾವನ್ನಪ್ಪಿದ್ದು, ಓರ್ವ ಗಾಯಗೊಂಡಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. 

ಇನ್ನು ಉಗ್ರರು ಗುಂಡಿನ ದಾಳಿ ಬಳಿಕ ಟ್ರಕ್ ಗಳಿಗೆ ಬೆಂಕಿ ಹಚ್ಚಿದ್ದಾರೆ  ಎನ್ನಲಾಗಿದೆ.  ನಿನ್ನೆ ರಾತ್ರಿ 8.30ರ ಹೊತ್ತಿಗೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ದಿಮಾಸಾ ನ್ಯಾಷನಲ್ ಲಿಬರೇಷನ್ ಆರ್ಮಿ (ಡಿಎನ್ ಎಲ್ ಎ) ಉಗ್ರರು ಗುಂಡಿನ ದಾಳಿ ನಡೆಸಿರಬಹುದು ಎಂದು ಶಂಕಿಸಲಾಗಿದೆ. ಟ್ರಕ್ ಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗುಂಡಿನ ದಾಳಿಯಲ್ಲಿ ಟ್ರಕ್ ಚಾಲಕರು ಮತ್ತು ಕೆಲಸಗಾರರು ಸಾವನ್ನಪ್ಪಿರುವುದಾಗಿ ದಿಮಾ ಹಸಾವೊ ಪೊಲೀಸ್ ವರಿಷ್ಠಾಧಿಕಾರಿ ಜಯಂತ್ ಸಿಂಗ್ ಮಾಹಿತಿ ನೀಡಿದ್ದಾರೆ.

ಸಿಮೆಂಟ್ ಕಾರ್ಖಾನೆ ಮಾಲೀಕರು ಡಿಎನ್ ಎಲ್ ಎ ಉಗ್ರರ ಹಣದ ಬೇಡಿಕೆಯನ್ನು ತಿರಸ್ಕರಿಸಿದ್ದಕ್ಕೆ ಈ ದಾಳಿ ನಡೆದಿರಬಹುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಹೆಚ್ಚುವರಿ ಪಡೆಗಳು ತೆರಳಿದ್ದು, ಉಗ್ರರ ಶೋಧ ಕಾರ್ಯಾಚರಣೆ ನಡೆಯುತ್ತಿರುವುದಾಗಿ ಸಿಂಗ್ ತಿಳಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel