ದೇಶ

ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಂತರ ಹಿಂಸಾಚಾರ: ಇಬ್ಬರನ್ನು ಬಂಧಿಸಿದ ಸಿಬಿಐ

Nagaraja AB

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಂತರದ ಹಿಂಸಾಚಾರದ ತನಿಖೆ ನಡೆಸುತ್ತಿರುವ ಸಿಬಿಐ ಶನಿವಾರ ಕೊಲೆ ಯತ್ನ ಆರೋಪದಲ್ಲಿ ನಾದಿಯಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಜಯ್ ಘೋಷ್ ಮತ್ತು ಅಸಿಮಾ ಘೋಷ್ ಬಂಧಿತ ಆರೋಪಿಗಳಾಗಿದ್ದಾರೆ.

ನಾದಿಯಾ ಜಿಲ್ಲೆಯ ಛಪ್ರಾದಲ್ಲಿ ಮೇ 14 ರಾತ್ರಿ ಧರ್ಮಾ ಮಂಡಲ್ ಎಂಬವರ ಮೇಲೆ ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಲಾಗಿತ್ತು. ಮಂಡಲ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು 15 ಕಡೆ ಶೋಧ ನಡೆಸಿದ್ದರು.

 ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ 8 ಮಂದಿ ವಿರುದ್ಧ ಪ್ರಕರಣ ದಾಖಲಿಸಿದೆ. ಅಲ್ಲದೇ, ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇನ್ನೂ 10 ಎಫ್ ಐಆರ್ ದಾಖಲಿಸಲಾಗಿದೆ. ಈವರೆಗೆ ಒಟ್ಟು 21 ಎಫ್ ಐಆರ್ ಗಳು ದಾಖಲಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

SCROLL FOR NEXT