ಭಾವನಾ ಗವಳಿ 
ದೇಶ

ಮನಿ ಲಾಂಡರಿಂಗ್ ಪ್ರಕರಣ: ಶಿವಸೇನಾ ಸಂಸದೆ ಭಾವನಾ ಗಾವಳಿ ಮನೆ, ಕಚೇರಿ ಮೇಲೆ ಇಡಿ ದಾಳಿ

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಸೋಮವಾರ ಮಹಾರಾಷ್ಟ್ರದ ಶಿವಸೇನೆ ಸಂಸದೆ ಭಾವನಾ ಗವಳಿಗೆ ಅವರಿಗೆ ಸಂಬಂಧಪಟ್ಟ ಅನೇಕ ಸ್ಥಳಗಳ ಮೇಲೆ ದಾಳಿ ನಡೆಸಿದೆ...

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಸೋಮವಾರ ಮಹಾರಾಷ್ಟ್ರದ ಶಿವಸೇನೆ ಸಂಸದೆ ಭಾವನಾ ಗವಳಿಗೆ ಅವರಿಗೆ ಸಂಬಂಧಪಟ್ಟ ಅನೇಕ ಸ್ಥಳಗಳ ಮೇಲೆ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮನಿ ಲಾಂಡರಿಂಗ್ ಕಾನೂನು(ಪಿಎಂಎಲ್‌ಎ) ಅಡಿಯಲ್ಲಿ ಯಾವತ್ಮಾಲ್-ವಾಶಿಮ್‌ ಲೋಕಸಭಾ ಕ್ಷೇತ್ರದ ಸಂಸದರ ಮನೆ, ಕಚೇರಿ ಸೇರಿದಂತೆ ಅವರಿಗೆ ಸಂಬಂಧಪಟ್ಟ ಕನಿಷ್ಠ ಏಳು ಸ್ಥಳಗಳ ಮೇಲೆ ದಾಳಿ ನಡೆಸಿ, ಶೋಧ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.

ಮಹಾರಾಷ್ಟ್ರ ಪೊಲೀಸ್ ಎಫ್‌ಐಆರ್ ಅನ್ನು ಆಧರಿಸಿ 18 ಕೋಟಿ ರೂಪಾಯಿ ವಂಚನೆ ಮತ್ತು ಇತರ ಅಕ್ರಮಗಳಿಗೆ ಸಂಬಂಧಿಸಿದಂತೆ ಇಡಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದೆ.

ವಾಶಿಮ್, ಮುಂಬೈ ಮತ್ತು ಇತರ ಕೆಲವು ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Bangladesh ಸರ್ಕಾರಿ ಕಚೇರಿಯಲ್ಲಿ ಭಾರತೀಯ ಅಧಿಕಾರಿ ನಿಗೂಢ ಸಾವು, ತನಿಖೆ ಆರಂಭ

Operation Sindoorಗೆ ಪಾಕಿಸ್ತಾನ ತಿರುಗೇಟು; ಭಾರತದ 2 ವಾಯುನೆಲೆ ಧ್ವಂಸ ಅಂತೆ..! ಆದ್ರೆ ಅದು ಅಸ್ತಿತ್ವದಲ್ಲೇ ಇಲ್ಲ..!

IPL Valuation Chart: 1.63 ಲಕ್ಷ ಕೋಟಿಗೇರಿದ ಐಪಿಎಲ್ ಮೌಲ್ಯ, CSK ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ KKR, 'ಕಿಂಗ್' ವಿರಾಟ್ ಕೊಹ್ಲಿ ಗಳಿಸಿದ್ದೆಷ್ಟು ಗೊತ್ತಾ?

'ಅನಕ್ಷರಸ್ಥ' ಪ್ರಧಾನಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ

ನಾಯಕತ್ವ ತ್ಯಜಿಸಿದ ಬಳಿಕ ಸಂಕಷ್ಟದಲ್ಲಿದ್ದೆ.. ನೆರವಿಗೆ ಬಂದಿದ್ದು 'ಜಾಮಿ' ಮಾತ್ರ: Virat Kohli

SCROLL FOR NEXT