ಭಾರತದಲ್ಲಿ ಕೋವಿಡ್-19 
ದೇಶ

ಕೋವಿಡ್-19: ಕಳೆದ 24 ಗಂಟೆ ಅವಧಿಯಲ್ಲಿ ದೇಶಾದ್ಯಂತ 42,909 ಹೊಸ ಪ್ರಕರಣ ಪತ್ತೆ, 380 ಮಂದಿ ಸಾವು

ಕೋವಿಡ್ ಮೂರನೇ ಅಲೆಯ ಭೀತಿಯ ನಡುವೆಯೇ ಇಂದು ದೇಶದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಅಲ್ಪ ಏರಿಕೆಯಾಗಿದ್ದು, ಕಳೆದ 24  ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 42,909 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ.

ನವದೆಹಲಿ: ಕೋವಿಡ್ ಮೂರನೇ ಅಲೆಯ ಭೀತಿಯ ನಡುವೆಯೇ ಇಂದು ದೇಶದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಅಲ್ಪ ಏರಿಕೆಯಾಗಿದ್ದು, ಕಳೆದ 24  ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 42,909 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ.

ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24  ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 42,909 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು,ದೇಶದಲ್ಲಿ ಪತ್ತೆಯಾದ ದೈನಂದಿನ ಪ್ರಕರಣಗಳ ಪೈಕಿ ಶೇ.50ಕ್ಕೂ ಹೆಚ್ಚು ಪ್ರಕರಣಗಳು ಕೇರಳದಲ್ಲಿ ವರದಿಯಾಗಿದ್ದು,  ಗರಿಷ್ಠ ಅಂದರೆ 29,836 ಸೋಂಕು ಪ್ರಕರಣಗಳ ಪತ್ತೆಯಾಗಿದೆ. 

ಅಂತೆಯೇ ಇದೇ ಅವಧಿಯಲ್ಲಿ 34,763 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಆ ಮೂಲಕ ದೇಶದಲ್ಲಿನ ಒಟ್ಟಾರೆ ಗುಣಮುಖರ ಸಂಖ್ಯೆ 3,19,23,405 ಕ್ಕೆ ಏರಿಕೆಯಾಗಿದೆ.

ಅಂತೆಯೇ ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 380 ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ ಕೋವಿಡ್ ಬಲಿಯಾದವರ ಸಂಖ್ಯೆ 4,38,210ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 3,76,324 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. 

ಇಲ್ಲಿಯ ವರೆಗೂ ದೇಶದಲ್ಲಿ 52.01 ಕೋಟಿ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, 63.43 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!