ಎನ್'ಸಿಪಿ ಮುಖ್ಯಸ್ಥ ಶರದ್ ಪವಾರ್ 
ದೇಶ

ಬಿಜೆಪಿ ವಿರೋಧಿಸುವವರು ಒಂದಾಗಬೇಕು: ಮಮತಾ ಭೇಟಿ ಬಳಿಕ ಶರದ್ ಪವಾರ್ ಹೇಳಿಕೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿದ ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು, ಬಿಜೆಪಿಯನ್ನು ಎದುರಿಸಲು ವಿರೋಧ ಪಕ್ಷಗಳ ಒಗ್ಗಟ್ಟಾಗಬೇಕು ಎಂದು ಬುಧವಾರ ಹೇಳಿದ್ದಾರೆ.

ಮುಂಬೈ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿದ ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು, ಬಿಜೆಪಿಯನ್ನು ಎದುರಿಸಲು ವಿರೋಧ ಪಕ್ಷಗಳ ಒಗ್ಗಟ್ಟಾಗಬೇಕು ಎಂದು ಬುಧವಾರ ಹೇಳಿದ್ದಾರೆ.

ಮಮತಾ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶರದ್ ಪವಾರ್ ಅವರು, ಇಂದಿನ ಸನ್ನಿವೇಶದಲ್ಲಿ ಸಮಾನ ಮನಸ್ಕ ಶಕ್ತಿಗಳು ರಾಷ್ಟ್ರಮಟ್ಟದಲ್ಲಿ ಒಂದುಗೂಡಬೇಕು ಮತ್ತು ಸಾಮೂಹಿಕ ನಾಯಕತ್ವ ರಚಿಸಬೇಕು. ಕಾಂಗ್ರೆಸ್ ಇರಲಿ, ಅಥವಾ ಇತರೆ ಯಾವುದೇ ಪಕ್ಷ ಇರಲಿ. ಬಿಜೆಪಿ ವಿರೋಧಿಸುವವರು ಒಂದಾಗಬೇಕು ಎಂದಿದ್ದಾರೆ.

ಕಾಂಗ್ರೆಸ್ ಅನ್ನು ಹೊರಗಿಟ್ಟು ಮೈತ್ರಿ ಮಾಡಿಕೊಳ್ಳುವ ಚಿಂತನೆ ಇದೆಯೇ? ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಪವಾರ್, ಬಿಜೆಪಿಯನ್ನು ವಿರೋಧಿಸುವ ಎಲ್ಲರಿಗೂ ನಮ್ಮೊಂದಿಗೆ ಸೇರಲು ಸ್ವಾಗತ. ಯಾರನ್ನೂ ಹೊರಗಿಡುವ ಪ್ರಶ್ನೆಯೇ ಇಲ್ಲ ಎಂದರು.

"ನಾವು ಚಾಲ್ತಿಯಲ್ಲಿರುವ ಪರಿಸ್ಥಿತಿ ಮತ್ತು ಎಲ್ಲಾ ಸಮಾನ ಮನಸ್ಕ ಪಕ್ಷಗಳು ಒಗ್ಗೂಡಿ ಬಿಜೆಪಿಗೆ ಬಲವಾದ ಪರ್ಯಾಯವನ್ನು ಒದಗಿಸುವ ಅಗತ್ಯವನ್ನು ಚರ್ಚಿಸಿದ್ದೇವೆ" ಎಂದು ಎನ್‌ಸಿಪಿ ಮುಖ್ಯಸ್ಥರು ಹೇಳಿದ್ದಾರೆ.

"ಈ ಹಂತದಲ್ಲಿ ನಾಯಕತ್ವದ ಪ್ರಶ್ನೆ ಬರುವುದಿಲ್ಲ, ನಾವು ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಕೆಲಸ ಮಾಡಬೇಕಾಗಿದೆ" ಎಂದು ಪವಾರ್ ತಿಳಿಸಿದ್ದಾರೆ.

ಇನ್ನೂ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರೊಗ್ರೆಸ್ಸಿವ್ ಅಲಯನ್ಸ್ (ಯುಪಿಎ) ಅಧ್ಯಕ್ಷರಾಗಲು ಬಯಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಮಮತಾ ಬ್ಯಾನರ್ಜಿ, "ಈಗ ಯುಪಿಎ ಇಲ್ಲ" ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT