ಸುಪ್ರೀಂ ಕೋರ್ಟ್ 
ದೇಶ

ಗ್ರಾಹಕ ನ್ಯಾಯಾಲಯಗಳಲ್ಲಿನ ಖಾಲಿ ಹುದ್ದೆ ಭರ್ತಿ ಮಾಡಿ, ಇಲ್ಲದಿದ್ದರೆ ಮುಖ್ಯ ಕಾರ್ಯದರ್ಶಿಗಳಿಗೆ ಸಮನ್ಸ್: ಸುಪ್ರೀಂ ಎಚ್ಚರಿಕೆ

ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಾಗೂ ಜಿಲ್ಲಾ ಗ್ರಾಹಕ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಿ. ಇಲ್ಲದಿದ್ದರೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸಮನ್ಸ್ ಜಾರಿ ಮಾಬೇಕಾಗುತ್ತದೆ...

ನವದೆಹಲಿ: ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಾಗೂ ಜಿಲ್ಲಾ ಗ್ರಾಹಕ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಿ. ಇಲ್ಲದಿದ್ದರೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸಮನ್ಸ್ ಜಾರಿ ಮಾಬೇಕಾಗುತ್ತದೆ ಎಂದು ರಾಜ್ಯಗಳಿಗೆ ಸುಪ್ರೀಂಕೋರ್ಟ್‌ ಬುಧವಾರ ಎಚ್ಚರಿಕೆ ನೀಡಿದೆ.

ಖಾಲಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿರುವ ಆದೇಶಕ್ಕೆ ಅನುಗುಣವಾಗಿ ಕ್ರಮ ಕೈಗೊಳ್ಳಿ, ಇಲ್ಲದಿದ್ದರೆ ಬರುವ ದಿನಗಳಲ್ಲಿ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸಮನ್ಸ್‌ ಜಾರಿ ಮಾಡಲಾಗುವುದು ಎಂದು ಹೇಳಿದೆ.

ನ್ಯಾಯಮೂರ್ತಿಗಳಾದ ಎಸ್‌.ಕೆ.ಕೌಲ್‌, ಎಂ.ಎಂ.ಸುಂದರೇಶ್ ಅವರಿದ್ದ ನ್ಯಾಯಪೀಠ, ಈ ಸಂಬಂಧ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಪ್ರಕರಣದ ವಿಚಾರಣೆ ನಡೆಸಿತು.

ಗ್ರಾಹಕರ ನ್ಯಾಯಾಲಯಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ಅನುದಾನ ನೀಡಿದೆ. ಒಂದು ವೇಳೆ ರಾಜ್ಯಗಳು ತಮ್ಮ ಪಾಲಿನ ಹಣವನ್ನು ನೀಡದಿದ್ದರೆ, ಈ ಅನುದಾನ ವಾಪಸ್ ಹೋಗುವ ಸಾಧ್ಯತೆ ಇದೆ ಎಂದೂ ನ್ಯಾಯಪೀಠ ಎಚ್ಚರಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ