ದೇಶ

ಕೋವಿಡ್ ನಿಂದಾಗಿ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಮನ್ನಾ ಮಾಡಿದ ಮಹಾರಾಷ್ಟ್ರ ಸರ್ಕಾರ

Lingaraj Badiger

ಮುಂಬೈ: ಕೊರೋನಾ ವೈರಸ್ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡಿರುವ 10 ಮತ್ತು 12ನೇ ತರಗತಿಯ ರಾಜ್ಯ ಪರೀಕ್ಷಾ ಮಂಡಳಿಯ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ಮನ್ನಾ ಮಾಡಲು ಮಹಾರಾಷ್ಟ್ರ ಸರ್ಕಾರ ಗುರುವಾರ ನಿರ್ಧರಿಸಿದೆ.

ಪೋಷಕರನ್ನು ಕಳೆದ 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳ 2021-22ನೇ ಸಾಲಿನ ಪರೀಕ್ಷಾ ಶುಲ್ಕವನ್ನು ಮನ್ನಾ ಮಾಡಲಾಗುವುದು ಮಹಾರಾಷ್ಟ್ರ ಶಾಲಾ ಶಿಕ್ಷಣ ಸಚಿವೆ ವರ್ಷಾ ಗಾಯಕ್ವಾಡ್ ಅವರು ಗುರುವಾರ ಹೇಳಿದ್ದಾರೆ.

"ಸಾಂಕ್ರಾಮಿಕ ರೋಗದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ನಮ್ಮ ಕಡೆಯಿಂದ ಇದು ಒಂದು ಸಣ್ಣ ಸಾಂತ್ವನ - 2021-22 ರ ರಾಜ್ಯ ಬೋರ್ಡ್ ಪರೀಕ್ಷೆಗಳ ಪರೀಕ್ಷಾ ಶುಲ್ಕವನ್ನು ಮನ್ನಾ ಮಾಡಲಾಗುತ್ತಿದೆ" ಎಂದು ಅವರು ತಿಳಿಸಿದ್ದಾರೆ.

ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳು ಈಗಾಗಲೇ ಸಾಕಷ್ಟು ಅನುಭವಿಸಿದ್ದಾರೆ ಎಂದು ನಮಗೆ ಗೊತ್ತು. ಆದರೆ ಅವರ ಶಿಕ್ಷಣ ಮುಂದುವರಿಯಬೇಕು" ಎಂದು ಅವರು ಹೇಳಿದರು.

SCROLL FOR NEXT