ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ 
ದೇಶ

ಹಣದುಬ್ಬರ ಕುರಿತ ಚರ್ಚೆಗೆ ರಾಜ್ಯಸಭೆ ಉಪ ಸಭಾಪತಿ ನಿರಾಕರಣೆ: ಪ್ರತಿಪಕ್ಷ ಸದಸ್ಯರ ಸಭಾತ್ಯಾಗ 

ಹಣದುಬ್ಬರ, ಬೆಲೆ ಏರಿಕೆ ಮತ್ತು ರೈತರಿಗೆ ಸಂಬಂಧಿಸಿದ ವಿಚಾರಗಳಿಂದಾಗಿ ಕಾಂಗ್ರೆಸ್ ಮತ್ತು ಇತರ ಪ್ರತಿಪಕ್ಷಗಳ ಸದಸ್ಯರು  ಗುರುವಾರ ರಾಜ್ಯಸಭೆಯಿಂದ ಸಭಾತ್ಯಾಗ ನಡೆಸಿದವು.

ನವದೆಹಲಿ: ಹಣದುಬ್ಬರ, ಬೆಲೆ ಏರಿಕೆ ಮತ್ತು ರೈತರಿಗೆ ಸಂಬಂಧಿಸಿದ ವಿಚಾರಗಳಿಂದಾಗಿ ಕಾಂಗ್ರೆಸ್ ಮತ್ತು ಇತರ ಪ್ರತಿಪಕ್ಷ ಸದಸ್ಯರು ಗುರುವಾರ ರಾಜ್ಯಸಭೆಯಿಂದ ಸಭಾತ್ಯಾಗ ನಡೆಸಿದರು.

ಹಣದುಬ್ಬರ ಕುರಿತ ಚರ್ಚೆಗೆ ಉಪ ಸಭಾಪತಿ ಹರಿವಂಶ್ ನಿರಾಕರಿಸಿದ ನಂತರ ಮೊದಲಿಗೆ ಕಾಂಗ್ರೆಸ್ ಸಭಾತ್ಯಾಗ ನಡೆಸಿತು. ತದನಂತರ ಎಡ ಪಕ್ಷ ಮತ್ತಿತರ ಕೆಲ ಸಣ್ಣ ಪಕ್ಷಗಳ ಮುಖಂಡರು ಸದನದಿಂದ ಹೊರಗೆ ನಡೆದರು. ರೈತರ ಸಮಸ್ಯೆಗಳನ್ನು ಎತ್ತಿ ಟಿಎಂಸಿ, ಟಿಆರ್ ಎಸ್ , ಡಿಎಂಕೆ ಮತ್ತಿತರ ಪಕ್ಷಗಳು ಸದಸ್ಯರು ಕೂಡಾ ಸಭಾತ್ಯಾಗ ನಡೆಸಿದರು.

ಹಣದುಬ್ಬರ, ಬೆಲೆ ಏರಿಕೆ ಮತ್ತಿತರ ವಿಚಾರಗಳ ಬಗ್ಗೆ ಚರ್ಚೆ ನಡೆಯಬೇಕೆಂದು ಪ್ರತಿಪಕ್ಷ ನಾಯಕ ಮಲ್ಲಿಕಾರ್ಜನ ಖರ್ಗೆ 
ಬೇಡಿಕೆಯಿಟ್ಟರು. ಪ್ರಶ್ನೋತ್ತರ ಅವಧಿ ಇದುದ್ದರಿಂದ ಆ ಬೇಡಿಕೆಯನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ಉಪ ಸಭಾಪತಿ ಹೇಳಿದರು.

ತದನಂತರ ಇತರ ಪಕ್ಷಗಳು ರೈತರ ಕುರಿತ ಸಮಸ್ಯೆಗಳು ಹಾಗೂ ಕನಿಷ್ಠ ಬೆಂಬಲ ಬೆಲೆ ವಿಚಾರ ಪ್ರಸ್ತಾಪಿಸಿ ಸದನದಿಂದ ನಿರ್ಗಮಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ