ಮನ್ಸುಖ್ ಮಾಂಡವೀಯಾ-ಬಸವರಾಜ ಬೊಮ್ಮಾಯಿ 
ದೇಶ

ದೆಹಲಿಯಲ್ಲಿ ಸಿಎಂ ಬೊಮ್ಮಾಯಿ: ಕೇಂದ್ರ ಸಚಿವರುಗಳ ಭೇಟಿ; ರಾಜ್ಯಕ್ಕೆ ಲಸಿಕೆ ಬೂಸ್ಟರ್ ಡೋಸ್ ನೀಡುವ ಕುರಿತು ಚರ್ಚೆ

ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಜಲಶಕ್ತಿ, ಆರೋಗ್ಯ ಹಾಗೂ ಕಾನೂನು ಸಚಿವರನ್ನು ಭೇಟಿ ಮಾಡಿದರು.

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಜಲಶಕ್ತಿ, ಆರೋಗ್ಯ ಹಾಗೂ ಕಾನೂನು ಸಚಿವರನ್ನು ಭೇಟಿ ಮಾಡಿದರು.

ಕೇಂದ್ರ ಸಚಿವರ ಭೇಟಿ ನಂತರ ಮುಖ್ಯಮಂತ್ರಿಗಳು ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಭದ್ರಾ ಮೇಲ್ದಂಡೆ ರಾಷ್ಟ್ರೀಯ ಯೋಜನೆ ಮಾಡೋದಕ್ಕೆ ಡಿಸೆಂಬರ್ 6ರಂದು ಮಹತ್ವದ ಸಭೆ ಇದೆ. ಈ ಸಭೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಲು ನಿರ್ಧಾರ ಕೈಗೊಳ್ಳಬೇಕೆಂಬ ಬಗ್ಗೆ ಕೇಂದ್ರ ಸಚಿವರೊಂದಿಗೆ ಚರ್ಚೆ ಮಾಡಿದ್ದೇವೆ. ಈ ನಿರ್ಣಯದ ಬಗ್ಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಸಕಾರಾತ್ಮಕವಾಗಿ ಒಪ್ಪಿಗೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು. 

ಅಲ್ಲದೆ, ಕೃಷ್ಣಾ ಮೇಲ್ದಂಡೆ 2ನೇ ಟ್ರಿಬುನಲ್ ನೋಟಿಫಿಕೇನ್ ವಿಚಾರ ಸುಪ್ರೀಂಕೋರ್ಟ್ ನಲ್ಲಿದೆ. ಅದರಲ್ಲಿ ಕೇಂದ್ರ ಸರ್ಕಾರ ತನ್ನ ನಿಲುವನ್ನು ಪ್ರಕಟ ಮಾಡಬೇಕು. ಮತ್ತು ಕಾನೂನು ಪ್ರಕಾರ ಟ್ರಿಬ್ಯುನಲ್ ಆಧಾರದಲ್ಲಿ ಸಂಪೂರ್ಣ ವರದಿ ಕೊಟ್ಟ ನಂತರ ಪರಿಪೂರ್ಣ ಪಾಲನೆಯಾಗಬೇಕು. ಆ ನಿಟ್ಟಿನಲ್ಲಿ ಜಲಶಕ್ತಿ ಇಲಾಖೆಯಿಂದ ನಿರ್ದೇಶನವನ್ನು ಹೊರಡಿಸಬೇಕೆಂಬ ವಿಚಾರವನ್ನು ಕೇಂದ್ರ ಸಚಿವರ ಮುಂದೆ ಇಟ್ಟಿದ್ದೇವೆ. ಇದಲ್ಲದೆ, ಗೋಧಾವರಿ, ಕಾವೇರಿ, ಕೃಷ್ಣಾ ಮಹಾನದಿ ಜೋಡಣೆ ಮಾಡುವ ಬಗ್ಗೆ ನಮ್ಮ ಅಹವಾಲನ್ನು ಕೇಳದೆ ಅದರ ಡಿಪಿಆರ್ ನ್ನು ಮಾಡಬಾರದು ಅನ್ನೋ ವಿಚಾರ ತಿಳಿಸಿದ್ದೇವೆ. ತಮಿಳುನಾಡಿನ ಜೋಡಣೆಯ ಯೋಜನೆ ಬಗ್ಗೆ ಮೇಕೆದಾಟು ಯೋಜನೆ ಪೂರ್ಣವಾಗುವರೆಗೂ ಕ್ಲಿಯರೆನ್ಸ್ ಕೊಡಬಾರದು ಅಂತಾ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ತಿಳಿಸಿದ್ದೇವೆ ಎಂದು ಮುಖ್ಯಮಂತ್ರಿ ಹೇಳಿದರು.

ರಾಜ್ಯಕ್ಕೆ ಬೂಸ್ಟರ್ ಡೋಸ್ ನೀಡುವ ಬಗ್ಗೆ ಚರ್ಚೆ
ಇನ್ನು ಕೋವಿಡ್ ನಿರ್ವಹಣೆ ಮತ್ತು ಈಗಿರುವ ಹೊಸ ತಳಿ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಮನ್ಸೂಕ್ ಮಾಂಡವಿಯಾ ಅವರ ಜೊತೆ ಚರ್ಚೆ ಮಾಡಿದ್ದೇವೆ. ಕೋವಿಡ್ ನಿರ್ವಹಣೆ ಬಗ್ಗೆ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಕೇಂದ್ರ ಸರ್ಕಾರ ಮೆಚ್ಚುಗೆ ವ್ಯಕ್ತಪಡಿಸಿದೆ. ಕರ್ನಾಟಕ ಲಸಿಕೆ ನೀಡುವುದರಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಇದೇ ವೇಗ ಮುಂದುವರಿಯಲಿ ಅಂತಾ ಆರೋಗ್ಯ ಸಚಿವರು ಹೇಳಿದ್ದಾರೆ. ಅಲ್ಲದೆ, ಆರೋಗ್ಯ ಸಿಬ್ಬಂದಿಗೆ ಬೂಸ್ಟರ್ ಡೋಸ್ ನೀಡುವ ಬಗ್ಗೆ ಕೇಂದ್ರ ಸಚಿವರನ್ನು ಪ್ರಶ್ನಿಸಿದಾಗ ಈ ಬಗ್ಗೆ ಕೋವಿಡ್ ತಜ್ಞರ ಜೊತೆ ಚರ್ಚೆ ನಡೆಸುತ್ತೇವೆ. ಬಳಿಕ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಂಡು ರಾಜ್ಯ ಸರ್ಕಾರಗಳಿಗೆ ತಿಳಿಸುತ್ತೇವೆ ಅನ್ನೋ ಬಗ್ಗೆ ಕೇಂದ್ರ ಸಚಿವ ಮನ್ಸೂಕ್ ಮಾಂಡವಿಯಾ ತಿಳಿಸಿದ್ದಾರೆ.ಕೇರಳದಿಂದ ಕರೊನಾ ಸೋಂಕು ಹರಡುವ ಬಗ್ಗೆ ರಾಜ್ಯ ಸರ್ಕಾರ ಉತ್ತಮ ಮಾರ್ಗಸೂಚಿಗಳನ್ನು ಅಳವಡಿಸಿಕೊಂಡಿದೆ ಅಂತಾ ಕೇಂದ್ರ ಸಚಿವರು ತಿಳಿಸಿದರು ಎಂದು ಮುಖ್ಯಮಂತ್ರಿಗಳು ಹೇಳಿದರು.

ಡಿಎಪಿ ಕೊರತೆ ಕುರಿತು ಕೇಂದ್ರ ಸಚಿವರ ಜೊತೆ ಚರ್ಚೆ
ಈ ಮಧ್ಯೆ ರಾಜ್ಯದಲ್ಲಿ ಡಿಎಪಿ ಕೊರತೆ ಇದೆ. ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಲ್ಲಿ ರಾಜ್ಯಕ್ಕೆ 48 ಸಾವಿರ ಮೆಟ್ರಿಕ್ ಟನ್ ಡಿಎಪಿ ಬೇಕಾಗುತ್ತದೆ. ಇದನ್ನು ಅವಧಿಯೊಳಗೆ ಕೇಂದ್ರ ಸರ್ಕಾರ ನೀಡಲಿದೆ ಅಂತಾ ಮುಖ್ಯಮಂತ್ರಿಗಳು ತಿಳಿಸಿದರು. ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ರಿಜು ಅವರನ್ನು ಭೇಟಿಯಾಗಿರುವುದಾಗಿ ತಿಳಿಸಿದ ಸಿಎಂ, ಜನವರಿಗೆ ರಾಜ್ಯಕ್ಕೆ ಭೇಟಿ ನೀಡುವಂತೆ ಆಹ್ವಾನ ನೀಡಿದ್ದೇನೆ. ರಾಜ್ಯಕ್ಕೆ ಇನ್ನಷ್ಟು ಕಾನೂನು ಮೂಲಸೌಕರ್ಯ ಒದಗಿಸುವಂತೆ ಕೇಂದ್ರ ಸಚಿವರಿಗೆ ಆಗ್ರಹಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ಪರಿಷತ್ ಮೈತ್ರಿ ಬಗ್ಗೆ ಯಡಿಯೂರಪ್ಪ ಅಂತಿಮ ನಿರ್ಧಾರ
ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ನೊಂದಿಗೆ ಮೈತ್ರಿ ವಿಚಾರ ಕುರಿತಂತೆ ಮಾತನಾಡಿದ ಮುಖ್ಯಮಂತ್ರಿಗಳು, ಹಿರಿಯ ನಾಯಕರಾದ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ಅವರು ಅಂತಿಮ ತೀರ್ಮಾನ ಕೈಗೊಳ್ಳುತ್ತಾರೆ. ಹಲವಾರು ಜಿಲ್ಲೆಗಳಲ್ಲಿ ಹಲವಾರು ಅಭಿಪ್ರಾಯಗಳಿವೆ. ಅವುಗಳೆಲ್ಲವನ್ನು ಸಮಗ್ರವಾಗಿ ನೋಡಿಕೊಂಡು ಬಿಜೆಪಿ ರಾಷ್ಟ್ರಾಧ್ಯಕ್ಷ ನಡ್ಡಾ, ಪ್ರಲ್ಹಾದ್ ಜೋಷಿ ಹಾಗೂ ಯಡಿಯೂರಪ್ಪ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video

ಒಂದು ಕಾಣದ ಕಣದ ಹುಡುಕಾಟ (ವಿಜ್ಞಾನ ವಿಶೇಷ)

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ