ಕೋವಿಡ್-19 ಲಸಿಕೆ 
ದೇಶ

ಓಮಿಕ್ರಾನ್ ಭೀತಿ: 40 ಹಾಗೂ ಮೇಲ್ಪಟ್ಟ ವಯಸ್ಸಿನವರಿಗೆ ಬೂಸ್ಟರ್ ಡೋಸ್ ಲಸಿಕೆಗೆ ಭಾರತೀಯ ವಿಜ್ಞಾನಿಗಳ ಶಿಫಾರಸು

ಕೊರೋನಾದ ಹೊಸ ರೂಪಾಂತರಿ ತಳಿ ಓಮಿಕ್ರಾನ್ ಪತ್ತೆಯಾಗಿದ್ದು, ಈ ಹೊಸ ಸೋಂಕು ಹರಡುತ್ತಿರುವ ಭೀತಿ ಎದುರಾಗಿತ್ತುದ್ದಂತೆಯೇ 40 ಹಾಗೂ ಮೇಲ್ಪಟ್ಟ ವಯಸ್ಸಿನವರಿಗೆ ಬೂಸ್ಟರ್ ಡೋಸ್ ಲಸಿಕೆ ನೀಡಲು ಭಾರತೀಯ ವಿಜ್ಞಾನಿಗಳು ಶಿಫಾರಸು ಮಾಡಿದ್ದಾರೆ.

ನವದೆಹಲಿ: ಕೊರೋನಾದ ಹೊಸ ರೂಪಾಂತರಿ ತಳಿ ಓಮಿಕ್ರಾನ್ ಪತ್ತೆಯಾಗಿದ್ದು, ಈ ಹೊಸ ಸೋಂಕು ಹರಡುತ್ತಿರುವ ಭೀತಿ ಎದುರಾಗಿತ್ತುದ್ದಂತೆಯೇ 40 ಹಾಗೂ ಮೇಲ್ಪಟ್ಟ ವಯಸ್ಸಿನವರಿಗೆ ಬೂಸ್ಟರ್ ಡೋಸ್ ಲಸಿಕೆ ನೀಡಲು ಭಾರತೀಯ ವಿಜ್ಞಾನಿಗಳು ಶಿಫಾರಸು ಮಾಡಿದ್ದಾರೆ.

40 ವರ್ಷದ ವಯಸ್ಸಿನವರು ಹೊಸ ರೂಪಾಂತರಿ ವೈರಾಣುವಿನಿಂದ ಹೆಚ್ಚಿನ ಅಪಾಯ ಹಾಗೂ ಹೆಚ್ಚು ತೆರೆದುಕೊಳ್ಳುವ ಮಂದಿಯಾಗಿರುವುದರಿಂದ ಈ ವಯಸ್ಸಿನ ಜನಸಂಖ್ಯೆಗೆ ಬೂಸ್ಟರ್ ಡೋಸ್ ಲಸಿಕೆ ನೀಡಬಹುದೆಂಬ ಅಭಿಮನತ ಭಾರತೀಯ ವಿಜ್ಞಾನಿಗಳದ್ದಾಗಿದೆ. 

ಭಾರತದ SARS-CoV-2 ಜೀನೋಮಿಕ್ಸ್ ಸೀಕ್ವೆನ್ಸಿಂಗ್ ಕನ್ಸೋರ್ಟಿಯಮ್ ನ ವಾರದ ಬುಲೆಟಿನ್ ನಲ್ಲಿ ಈ ಶಿಫಾರಸನ್ನು ಮಂಡಿಸಲಾಗಿದೆ. ಇನ್ನೂ ಲಸಿಕೆ ಪಡೆಯದ ಹೆಚ್ಚು ಅಪಾಯವನ್ನು ಎದುರಿಸಬಹುದಾದ ಮಂದಿಗೆ ಲಸಿಕೆ ಹಾಗೂ 40 ಕ್ಕಿಂತ ಹೆಚ್ಚಿನ ವಯಸ್ಸಿನಲ್ಲಿರುವ ಮಂದಿಗೆ ಬೂಸ್ಟರ್ ಡೋಸ್ ನೀಡುವುದನ್ನು ಸರ್ಕಾರ ಪರಿಗಣಿಸಬೇಕಿದೆ ಎಂದು ಜೀನೋಮಿಕ್ಸ್ ಸೀಕ್ವೆನ್ಸಿಂಗ್ ಕನ್ಸೋರ್ಟಿಯಮ್ ಸಲಹೆ ನೀಡಿದೆ.

ಲೋಕಸಭೆಯಲ್ಲಿ ಕೊರೋನಾ ಸಾಂಕ್ರಾಮಿಕ ಪರಿಸ್ಥಿತಿಯ ಚರ್ಚೆಯ ಸಂದರ್ಭದಲ್ಲೂ ಸಂಸದರು ಬೂಸ್ಟರ್ ಡೋಸ್ ಗಾಗಿ ಆಗ್ರಹಿಸಿದ್ದರು. ಈ ವೈರಾಣು ಸೋಂಕು ಇದೆಯೇ ಇಲ್ಲವೇ ಎಂಬುದನ್ನು ವೇಗವಾಗಿ ಪತ್ತೆ ಮಾಡುವುದಕ್ಕೆ ಜಿನೋಮಿಕ್ ಕಣ್ಗಾವಲು ಬಹಳ ಮುಖ್ಯವಾಗುತ್ತದೆ ಎಂದು ಐಎನ್ ಎಸ್ಎಸಿಒಜಿ ಹೇಳಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel