ಕೋವಿಶೀಲ್ಡ್ ಪ್ರಸ್ತುತ ಮಾಸಿಕ ಉತ್ಪಾದನಾ ಸಾಮರ್ಥ್ಯ 250-275 ಮಿಲಿಯನ್ ಡೋಸ್, ಕೋವಾಕ್ಸಿನ್ 50-60 ಮಿಲಿಯನ್ ಡೋಸ್: ಕೇಂದ್ರ
ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ತಿಳಿಸಿರುವಂತೆ, ಕೋವಿಡ್ ಲಸಿಕೆ ಕೋವಿಶೀಲ್ಡ್ನ ಪ್ರಸ್ತುತ ಮಾಸಿಕ ಉತ್ಪಾದನಾ ಸಾಮರ್ಥ್ಯ 250-275 ಮಿಲಿಯನ್ ಡೋಸ್ ಆಗಿದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಲೋಕಸಭೆಗೆ ತಿಳಿಸಿದೆ.
ನವದೆಹಲಿ: ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ತಿಳಿಸಿರುವಂತೆ, ಕೋವಿಡ್ ಲಸಿಕೆ ಕೋವಿಶೀಲ್ಡ್ನ ಪ್ರಸ್ತುತ ಮಾಸಿಕ ಉತ್ಪಾದನಾ ಸಾಮರ್ಥ್ಯ 250-275 ಮಿಲಿಯನ್ ಡೋಸ್ ಆಗಿದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಲೋಕಸಭೆಗೆ ತಿಳಿಸಿದೆ.
ಇದಲ್ಲದೆ, ಹೈದರಾಬಾದ್ನ ಭಾರತ್ ಬಯೋಟೆಕ್ ಇಂಟರ್ನ್ಯಾಶನಲ್ ಲಿಮಿಟೆಡ್ ತಿಳಿಸಿರುವಂತೆ, ಪ್ರಸ್ತುತ ಮಾಸಿಕ ಕೋವಾಕ್ಸಿನ್ ಉತ್ಪಾದನಾ ಸಾಮರ್ಥ್ಯವು 50-60 ಮಿಲಿಯನ್ ಡೋಸ್ ಆಗಿದೆ ಎಂದು ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವ ಭಾರತಿ ಪ್ರವೀಣ್ ಪವಾರ್ ಅವರು ಇಂದು ಲೊಕಸಭೆಗೆ ಲಿಖಿತ ಉತ್ತರ ನೀಡಿದ್ದಾರೆ.
ಈ ಎರಡು ಅನುಮೋದಿತ ಕೋವಿಡ್ ಲಸಿಕೆ ತಯಾರಕರು ಗರಿಷ್ಠ ಉತ್ಪಾದನಾ ಸಾಮರ್ಥ್ಯವನ್ನು ಸಾಧಿಸಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪವಾರ್, "ಎರಡೂ ಕಂಪನಿಗಳು ಪ್ರಸ್ತುತ ಉತ್ಪಾದನಾ ಸಾಮರ್ಥ್ಯದ ಶೇ. 90 ರಷ್ಟು ಸಾಧಿಸಿವೆ" ಎಂದು ಹೇಳಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.