ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ ಏರಿದ ಕೊರೋನಾ ಅಬ್ಬರ: ದೇಶದಲ್ಲಿಂದು ಬರೋಬ್ಬರಿ 2,796 ಮಂದಿ ಸಾವು, ಏಕಾಏಕಿ ಏರಿದ ಸಾವಿನ ಸಂಖ್ಯೆ!!

ಭಾರತದಲ್ಲಿ ಮಹಾಮಾರಿ ಕೊರೋನಾ ಸ್ಫೋಟಗೊಂಡಿದ್ದು, ದೇಶದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ಬರೋಬ್ಬರಿ 2,796 ಮಂದಿ ಸಾವನ್ನಪ್ಪಿದ್ದು, ಇದೇ ಅವಧಿಯಲ್ಲಿ 8,895 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಸ್ಫೋಟಗೊಂಡಿದ್ದು, ದೇಶದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ಬರೋಬ್ಬರಿ 2,796 ಮಂದಿ ಸಾವನ್ನಪ್ಪಿದ್ದು, ಇದೇ ಅವಧಿಯಲ್ಲಿ 8,895 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಭಾನುವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,46,33,255ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,73,326ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 99,155ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 6,918 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,40,60,774ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 12,26,064 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 64,72,52,850 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,27,61,83,065 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ