ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ 5ನೇ ಓಮಿಕ್ರಾನ್ ಕೇಸ್ ಪತ್ತೆ: ತಾಂಜಾನಿಯಾದಿಂದ ದೆಹಲಿಗೆ ಬಂದಿದ್ದ ವ್ಯಕ್ತಿಯಲ್ಲಿ ಸೋಂಕು ದೃಢ!

ಭಾರತದಲ್ಲಿ ಓಮಿಕ್ರಾನ್​ ರೂಪಾಂತರ ಸೋಂಕಿನ ಪ್ರಕರಣಗಳು ದಿನೇದಿನೇ ಏರಿಕೆಯಾಗುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 5ನೇ ಪ್ರಕರಣ​ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಈ ಮೂಲಕ ದೆಹಲಿಯಲ್ಲಿ ಮೊದಲನೇ ಓಮಿಕ್ರಾನ್​ ಪ್ರಕರಣ ಪತ್ತೆಯಾದಂತಾಗಿದೆ.

ನವದೆಹಲಿ: ಭಾರತದಲ್ಲಿ ಓಮಿಕ್ರಾನ್​ ರೂಪಾಂತರ ಸೋಂಕಿನ ಪ್ರಕರಣಗಳು ದಿನೇದಿನೇ ಏರಿಕೆಯಾಗುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 5ನೇ ಪ್ರಕರಣ​ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಈ ಮೂಲಕ ದೆಹಲಿಯಲ್ಲಿ ಮೊದಲನೇ ಓಮಿಕ್ರಾನ್​ ಪ್ರಕರಣ ಪತ್ತೆಯಾದಂತಾಗಿದೆ.

ಸೋಂಕಿತನನ್ನು ಎಲ್​​ಎನ್​​ಜೆಪಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಇವರು ತಾಂಜಾನಿಯದಿಂದ ಬಂದವರಾಗಿದ್ದರೆಂದು ತಿಳಿದುಬಂದಿದೆ. ಇದರ ಜೊತೆಗೆ ಇನ್ನೂ 17 ಮಂದಿಯಲ್ಲಿ ಕೊವಿಡ್​ 19 ಸೋಂಕು ಕಾಣಿಸಿಕೊಂಡಿದ್ದು, ಅವರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್​ ಮಾಹಿತಿ ನೀಡಿದ್ದಾರೆ.

ದಕ್ಷಿಣ ಆಫ್ರಿಕಾದಲ್ಲಿ ಮೊದಲು ಪತ್ತೆಯಾದ ಓಮಿಕ್ರಾನ್​ ಸೋಂಕು ಭಾರತದಲ್ಲಿ ಮೊದಲು ಕರ್ನಾಟಕದ ಬೆಂಗಳೂರಿನಲ್ಲಿ ಕಾಣಿಸಿಕೊಂಡಿತ್ತು. ಬೆಂಗಳೂರಿನಲ್ಲಿ ಇಬ್ಬರಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿತ್ತು.

ಇದೂವರೆಗೆ ಕರ್ನಾಟಕದಲ್ಲಿ 2, ಗುಜರಾತ್​ನಲ್ಲಿ ಒಂದು ಪ್ರಕರಣ, ಮುಂಬೈನಲ್ಲಿ 1 ಓಮಿಕ್ರಾನ್​ ಕೇಸ್​ ದೃಢಪಟ್ಟಿತ್ತು. ಸದ್ಯ ರಾಷ್ಟ್ರ ರಾಜಧಾನಿಯಲ್ಲಿ ಇನ್ನೊಂದು ಕೇಸ್​ ಪತ್ತೆಯಾಗಿದ್ದು, ದೇಶದಲ್ಲಿ ಹೊಸ ರೂಪಾಂತರಿ ತಳಿಯ ಕೇಸ್​ಗಳು 5ಕ್ಕೆ ಏರಿಕೆ ಕಂಡಿವೆ.

ಓಮಿಕ್ರಾನ್​ ಈಗಾಗಲೇ 30ಕ್ಕೂ ಹೆಚ್ಚು ದೇಶಗಳಲ್ಲಿ ಪತ್ತೆಯಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯೂ ಕೂಡ ಮುನ್ನೆಚ್ಚರಿಕೆ ವಹಿಸಿದೆ. ಈ ಸೋಂಕು ಅಷ್ಟೊಂದು ಮಾರಣಾಂತಿಕವಲ್ಲದೆ ಇದ್ದರೂ, ಮೂರನೇ ಅಲೆ ಉಂಟು ಮಾಡುವಷ್ಟು ಪ್ರಸರಣ ಸಾಮರ್ಥ್ಯ ಹೊಂದಿದೆ ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಮಧ್ಯೆ ಭಾರತದಲ್ಲೂ ಕೂಡ ಓಮಿಕ್ರಾನ್​ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್: ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!

ಸಂಪುಟ ವಿಸ್ತರಣೆ ಮುನಿಸು ಕೊನೆಗೂ ಶಮನ: ರಾಜೀನಾಮೆ ವಾಪಸ್ ಪಡೆದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್

ರಾಜ್‌ಗಢದಲ್ಲಿ ಭಾರೀ ಮಳೆ: 11 ಪ್ರಯಾಣಿಕರ ಸಮೇತ ಚರಂಡಿಯಲ್ಲಿ ಕೊಚ್ಚಿ ಹೋದ ವ್ಯಾನ್; 9 ಮಂದಿ ಸಾವು!

ದೇಶದ ಅತ್ಯಂತ ದುಬಾರಿ ಪೆಂಟ್‌ಹೌಸ್! ಈ ಐಷಾರಾಮಿ ಮನೆ 271 ಕೋಟಿಗೆ ಮಾರಾಟ!