ಸಂಗ್ರಹ ಚಿತ್ರ 
ದೇಶ

ಉತ್ತರ ಪ್ರದೇಶ: ಮಾಜಿ ಬ್ಲಾಕ್ ಮುಖ್ಯಸ್ಥನ ಬೆಂಗಾವಲು ವಾಹನದ ಮೇಲೆ ದಾಳಿ, ಐವರಿಗೆ ಗಾಯ

ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಮಾಜಿ ಬ್ಲಾಕ್ ಮುಖ್ಯಸ್ಥ ಹಾಜಿ ಯೂನಸ್ ಅವರ ಬೆಂಗಾವಲು ಪಡೆಯ ಮೇಲೆ ಗುಂಡಿನ ದಾಳಿ ನಡೆದಿದ್ದು, ಐವರು ಗಾಯಗೊಂಡಿದ್ದಾರೆ. ಪೊಲೀಸರು ಈ ಮಾಹಿತಿ ನೀಡಿದ್ದಾರೆ.

ಬುಲಂದ್‌ಶಹರ್: ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಮಾಜಿ ಬ್ಲಾಕ್ ಮುಖ್ಯಸ್ಥ ಹಾಜಿ ಯೂನಸ್ ಅವರ ಬೆಂಗಾವಲು ಪಡೆಯ ಮೇಲೆ ಗುಂಡಿನ ದಾಳಿ ನಡೆದಿದ್ದು, ಐವರು ಗಾಯಗೊಂಡಿದ್ದಾರೆ. ಪೊಲೀಸರು ಈ ಮಾಹಿತಿ ನೀಡಿದ್ದಾರೆ.

ಸದ್ಯ ಜೈಲಿನಲ್ಲಿರುವ ಯೂನಸ್ ಎಂಬುವರು ಸೋದರಳಿಯ ಅನಸ್ ದಾಳಿಯ ಹಿಂದೆ ಇರಬಹುದೆಂದು ಶಂಕಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೋಟ್ವಾಲಿ ಗ್ರಾಮಾಂತರ ಪ್ರದೇಶದ ಭೈಪುರ್ ಗ್ರಾಮದಲ್ಲಿ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಮಿರ್ಜಾಪುರ ಗ್ರಾಮಕ್ಕೆ ಹಿಂತಿರುಗುತ್ತಿದ್ದಾಗ ಮಾಜಿ ಬ್ಲಾಕ್ ಮುಖ್ಯಸ್ಥರ ಬೆಂಗಾವಲು ಪಡೆ ಮೇಲೆ ದಾಳಿ ನಡೆಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಕುಮಾರ್ ಸಿಂಗ್ ಹೇಳಿದ್ದಾರೆ.

ಕಾರಿನಲ್ಲಿ ಬಂದ ದಾಳಿಕೋರರು ರಾಜವಾಹ ಸೇತುವೆ ಬಳಿ ಬೆಂಗಾವಲು ಪಡೆಯ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಹೇಳಿದರು.

ಯೂನಸ್ ಎರಡು ಬಾರಿ ಬಿಎಸ್‌ಪಿ ಶಾಸಕ ಹಾಜಿ ಅಲೀಂ ಅವರ ಸಹೋದರ ಎಂಬುದು ಗಮನಾರ್ಹ. 2018ರಲ್ಲಿ ಅಲೀಂ ಅವರನ್ನು ಅವರ ಮನೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಾಕಿಸ್ತಾನದ ಉನ್ನತ ರಾಜತಾಂತ್ರಿಕರಿಗೆ ಭಾರತದ ಸಮನ್ಸ್; ಗಡಿಯಾಚೆಗಿನ ಒಳನುಸುಳುವಿಕೆಯ ವಿರುದ್ಧ ಪ್ರತಿಭಟನೆ

ಶಿಕ್ಷಕರ ಕೊರತೆ ಎಂದು ದೂರಿದ್ದೇ ತಪ್ಪಾಯ್ತು ಪಂಜಾಬ್ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತು!

ಸ್ಟೈಲಿಶ್ ಕಪ್ಪು ಉಡುಪಿನಲ್ಲಿ ಮಿಂಚಿದ ಪಾರ್ವತಿ ತಿರುವೋತ್; ದಂಗಾದ ಅಭಿಮಾನಿಗಳು, Video!

Asian Games 2026: ಮಲೇಷ್ಯಾ ಸೋಲಿಸಿ ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

ಬಿಜೆಪಿ ಜಿಲ್ಲಾಧ್ಯಕ್ಷರಿಂದ ನನ್ನ ಮೇಲೆ ಪದೇ ಪದೇ ಅತ್ಯಾಚಾರ: ಉತ್ತರ ಪ್ರದೇಶ ಪಕ್ಷದ ನಾಯಕಿಯ ಗಂಭೀರ ಆರೋಪ