ಫಾರೂಕ್ ಅಬ್ದುಲ್ಲಾ 
ದೇಶ

'ನಮ್ಮ ಹಕ್ಕುಗಳನ್ನು ಮರಳಿ ಪಡೆಯಲು ನಾವು ರೈತರಂತೆ ತ್ಯಾಗ ಮಾಡಬೇಕು': ಫಾರೂಕ್ ಅಬ್ದುಲ್ಲಾ

ಕೇಂದ್ರ ಕಸಿದುಕೊಂಡಿರುವ ಹಕ್ಕುಗಳನ್ನು ಮರಳಿ ಪಡೆಯಲು ರೈತರಂತೆ ತ್ಯಾಗ ಮಾಡಬೇಕಾದ ಪರಿಸ್ಥಿತಿಗೆ ಸಿದ್ಧರಾಗಿ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಡಾ. ಫಾರೂಕ್ ಅಬ್ದುಲ್ಲಾ ಪಕ್ಷದ ಸದಸ್ಯರಿಗೆ ಕರೆ ನೀಡಿದ್ದಾರೆ. 

ಶ್ರೀನಗರ: ಕೇಂದ್ರ ಕಸಿದುಕೊಂಡಿರುವ ಹಕ್ಕುಗಳನ್ನು ಮರಳಿ ಪಡೆಯಲು ರೈತರಂತೆ ತ್ಯಾಗ ಮಾಡಬೇಕಾದ ಪರಿಸ್ಥಿತಿಗೆ ಸಿದ್ಧರಾಗಿ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಡಾ. ಫಾರೂಕ್ ಅಬ್ದುಲ್ಲಾ ಪಕ್ಷದ ಸದಸ್ಯರಿಗೆ ಕರೆ ನೀಡಿದ್ದಾರೆ. 

ಹಜರತ್‌ಬಾಲ್‌ನಲ್ಲಿರುವ ತಮ್ಮ ತಂದೆ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಕುಲಪತಿ ಶೇಖ್ ಮುಹಮ್ಮದ್ ಅಬ್ದುಲ್ಲಾ ಅವರ ಸಮಾಧಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಮತ್ತು ಮುಖಂಡರು ಪ್ರತಿ ಗ್ರಾಮ ಮತ್ತು ಪ್ರದೇಶದಲ್ಲಿ ತಳಮಟ್ಟದ ಜನರೊಂದಿಗೆ ಸಂಪರ್ಕದಲ್ಲಿರಬೇಕು ಎಂದು ಫಾರೂಕ್ ಅಬ್ದುಲ್ಲಾ ಹೇಳಿದರು. 

700 ರೈತರ ಬಲಿದಾನದ ನಂತರ ಕೇಂದ್ರ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಿದೆ. ಕೇಂದ್ರವು ನಮ್ಮಿಂದ ಕಸಿದುಕೊಂಡಿರುವ ಹಕ್ಕುಗಳನ್ನು ಮರಳಿ ಪಡೆಯಲು ನಾವು ಇದೇ ರೀತಿಯ ತ್ಯಾಗ ಮಾಡಬೇಕಾಗಬಹುದು ಎಂದರು. 

ನ್ಯಾಶನಲ್ ಕಾನ್ಫರೆನ್ಸ್ ಅಧ್ಯಕ್ಷ ಅಬ್ದುಲ್ಲಾ ಅವರು, ಅಚಲರಾಗಿ ನಿಂತು ತಮ್ಮ ಹೋರಾಟವನ್ನು ಕೈಬಿಡದೆ ಯಶಸ್ವಿಯಾದ ರೈತರಂತೆ ನಾವು ಪ್ರಾಣವನ್ನು ಪಣಕ್ಕಿಟ್ಟು 370 ಮತ್ತು 35ಎ ವಿಧಿ ರದ್ದುಗೊಳಿಸಿರುವ ನಿರ್ಧಾರವನ್ನು ಹಿಂಪಡೆಯುವಂತೆ ಕೇಂದ್ರವನ್ನು ಒತ್ತಾಯಿಸಬೇಕು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT