ಸರ್ಗೆ ಶೋಯಿಗು - ರಾಜನಾಥ್ ಸಿಂಗ್ 
ದೇಶ

AK-203 ಒಪ್ಪಂದಕ್ಕೆ ಭಾರತ ಮತ್ತು ರಷ್ಯಾ ಸಹಿ, ಮಿಲಿಟರಿ ಸಹಕಾರಕ್ಕಾಗಿ 10 ವರ್ಷಗಳ ಒಪ್ಪಂದ ನವೀಕರಣ

ಭಾರತ ಮತ್ತು ರಷ್ಯಾ ಸಣ್ಣ ಶಸ್ತ್ರಾಸ್ತ್ರಗಳು ಮತ್ತು ಮಿಲಿಟರಿ ಸಹಕಾರವನ್ನು ಒಳಗೊಂಡ ಹಲವಾರು ಒಪ್ಪಂದಗಳು ಮತ್ತು ಪ್ರೋಟೋಕಾಲ್‌ಗಳಿಗೆ ಸಹಿ ಹಾಕಿವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೋಮವಾರ ರಷ್ಯಾ ರಕ್ಷಣಾ ಸಚಿವ ಸರ್ಗೆ...

ನವದೆಹಲಿ: ಭಾರತ ಮತ್ತು ರಷ್ಯಾ ಸಣ್ಣ ಶಸ್ತ್ರಾಸ್ತ್ರಗಳು ಮತ್ತು ಮಿಲಿಟರಿ ಸಹಕಾರವನ್ನು ಒಳಗೊಂಡ ಹಲವಾರು ಒಪ್ಪಂದಗಳು ಮತ್ತು ಪ್ರೋಟೋಕಾಲ್‌ಗಳಿಗೆ ಸಹಿ ಹಾಕಿವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೋಮವಾರ ರಷ್ಯಾ ರಕ್ಷಣಾ ಸಚಿವ ಸರ್ಗೆ ಶೋಯಿಗು ಅವರನ್ನು ಭೇಟಿಯಾದ ನಂತರ ತಿಳಿಸಿದ್ದಾರೆ.

"ಭಾರತಕ್ಕೆ ರಷ್ಯಾದ ಬಲವಾದ ಬೆಂಬಲವನ್ನು ಭಾರತ ಶ್ಲಾಘಿಸುತ್ತದೆ. ನಮ್ಮ ಸಹಕಾರವು ಇಡೀ ಪ್ರದೇಶಕ್ಕೆ ಶಾಂತಿ, ಸಮೃದ್ಧಿ ಮತ್ತು ಸ್ಥಿರತೆಯನ್ನು ತರುತ್ತದೆ ಎಂದು ನಾವು ಭಾವಿಸುತ್ತೇವೆ. ಸಣ್ಣ ಶಸ್ತ್ರಾಸ್ತ್ರಗಳು ಮತ್ತು ಮಿಲಿಟರಿ ಸಹಕಾರಕ್ಕೆ ಸಂಬಂಧಿಸಿದಂತೆ ಹಲವಾರು ಒಪ್ಪಂದಗಳು/ ಪ್ರೋಟೋಕಾಲ್‌ಗಳಿಗೆ ಸಹಿ ಹಾಕಿರುವುದು ಸಂತೋಷ ತಂದಿದೆ" ಎಂದು ರಾಜನಾಥ್ ಸಿಂಗ್ ಎಂದು ಟ್ವೀಟ್ ಮಾಡಿದ್ದಾರೆ.

ಭಾರತ ಮತ್ತು ರಷ್ಯಾ ನಡುವಿನ ಸಂಬಂಧಗಳ ಪ್ರಾಮುಖ್ಯತೆಯನ್ನು ಒತ್ತಿಹೇಳಿರುವ ರಾಜನಾಥ್ ಸಿಂಗ್ ಅವರು, ರಕ್ಷಣಾ ಸಹಕಾರವು ದ್ವಿಪಕ್ಷೀಯ ಪಾಲುದಾರಿಕೆಯ ಪ್ರಮುಖ ಸ್ತಂಭಗಳಲ್ಲಿ ಒಂದಾಗಿದೆ ಎಂದಿದ್ದಾರೆ.

ಶೋಯಿಗು ಅವರೊಂದಿಗಿನ ಮಾತುಕತೆ "ಉತ್ಪಾದಕ, ಫಲಪ್ರದ ಮತ್ತು ಗಣನೀಯ" ಎಂದು ಕರೆದಿರುವ ರಾಜನಾಥ್ ಸಿಂಗ್, "ಭಾರತವು ರಷ್ಯಾದೊಂದಿಗೆ ತನ್ನ ವಿಶೇಷ ಮತ್ತು ವಿಶಿಷ್ಠ ಕಾರ್ಯತಂತ್ರದ ಪಾಲುದಾರಿಕೆಯನ್ನು ಗೌರವಿಸುತ್ತದೆ" ಎಂದು ಹೇಳಿದ್ದಾರೆ.

2021 ರಿಂದ 2031ರ ವರೆಗೆ ಮಿಲಿಟರಿ-ತಾಂತ್ರಿಕ ಸಹಕಾರ ವ್ಯವಸ್ಥೆಯಡಿ ಭಾರತ-ರಷ್ಯಾ ರೈಫಲ್ಸ್ ಪ್ರೈವೇಟ್ ಲಿಮಿಟೆಡ್ ಮೂಲಕ 6,01,427 ಅಸಾಲ್ಟ್ ರೈಫಲ್ಸ್ AK-203 ಖರೀದಿ ಒಪ್ಪಂದಕ್ಕೆ ಭಾರತ ಮತ್ತು ರಷ್ಯಾ ಸಹಿ ಹಾಕಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT