ಮೋನ್ ಪಟ್ಟಣದಲ್ಲಿ ಭದ್ರತಾ ಸಿಬ್ಬಂದಿ 
ದೇಶ

ನಾಗಾಲ್ಯಾಂಡ್ ನಾಗರಿಕರ ಹತ್ಯೆ: ಭದ್ರತಾ ಪಡೆಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ ಪೊಲೀಸರು

ನಾಗಾಲ್ಯಾಂಡ್ ನಲ್ಲಿ ನಾಗರಿಕರ ಮೇಲೆ ಗುಂಡಿನ ದಾಳಿ ನಡೆಸಿದ ಆರೋಪದ ಮೇಲೆ ಭಾರತೀಯ ಸೇನೆಯ 21ನೇ ಪ್ಯಾರಾ ವಿಶೇಷ ಪಡೆ ವಿರುದ್ಧ ನಾಗಾಲ್ಯಾಂಡ್ ಪೊಲೀಸರು ಸೋಮವಾರ ಕೊಲೆ ಪ್ರಕರಣ ದಾಖಲಿಸಿದ್ದಾರೆ.

ಕೋಹಿಮಾ: ನಾಗಾಲ್ಯಾಂಡ್ ನಲ್ಲಿ ನಾಗರಿಕರ ಮೇಲೆ ಗುಂಡಿನ ದಾಳಿ ನಡೆಸಿದ ಆರೋಪದ ಮೇಲೆ ಭಾರತೀಯ ಸೇನೆಯ 21ನೇ ಪ್ಯಾರಾ ವಿಶೇಷ ಪಡೆ ವಿರುದ್ಧ ನಾಗಾಲ್ಯಾಂಡ್ ಪೊಲೀಸರು ಸೋಮವಾರ ಕೊಲೆ ಪ್ರಕರಣ ದಾಖಲಿಸಿದ್ದಾರೆ. ಮತ್ತೊಂದೆಡೆ ಭದ್ರತಾ ಪಡೆಗಳಿಂದ 14 ನಾಗರಿಕರ ಹತ್ಯೆ ಖಂಡಿಸಿ ಬುಡಕಟ್ಟು ಸಂಸ್ಥೆಗಳು ಬಂದ್‌ಗೆ ಕರೆ ನೀಡಿವೆ.

ಮೋನ್ ಪಟ್ಟಣದಲ್ಲಿ ಸಿಆರ್‌ಪಿಸಿ ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ಭದ್ರತೆ ಬಿಗಿಗೊಳಿಸಲಾಗಿದೆ. ಆದರೂ ಪರಿಸ್ಥಿತಿ ಉದ್ವಿಗ್ನವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈಮಧ್ಯೆ, ನಾಗಾಲ್ಯಾಂಡ್‌ನ ಮೋನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಾಗರಿಕರ ಮೇಲೆ ನಡೆಸಿದ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಗೊಂದಲ ಉಂಟಾಗಿದೆ. ಜಿಲ್ಲೆಯಲ್ಲಿನ ಕೊನ್ಯಾಕ್ ಯೂನಿಯನ್, ಗುಂಡಿನ ದಾಳಿಯಲ್ಲಿ 17 ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಆರಂಭದಲ್ಲಿ ಹೇಳಿತ್ತು. ಆದರೆ ನಂತರ ಆ  ಸಂಖ್ಯೆಯನ್ನು 14ಕ್ಕೆ ಇಳಿಸಲಾಗಿದೆ.
 

ಆದಾಗ್ಯೂ, ಶನಿವಾರ ಮತ್ತು ಭಾನುವಾರದಂದು ನಡೆದ ಪ್ರತ್ಯೇಕ ಗುಂಡಿನ ದಾಳಿಯಲ್ಲಿ 14 ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಸಮರ್ಥಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬೆಂಜಮಿನ್ ನೆತನ್ಯಾಹು ಮಾಡಿದ ಫೋನ್ ಕರೆಯೇ ಅಮೆರಿಕ-ಇರಾನ್ ಶಾಂತಿ ಮಾತುಕತೆ ಹಳಿತಪ್ಪುವಂತೆ ಮಾಡಿತು'

ಮಹಿಳಾ ಕೋಟಾ ಕಾನೂನು ಸಮಾನತೆಯ ಭಾರತಕ್ಕೆ ಪ್ರಮುಖ: ಪ್ರಧಾನಿ ಮೋದಿ

ಕ್ಷೇತ್ರಗಳ ಮರುವಿಂಗಡಣೆ ಪ್ರಸ್ತಾಪ ಅತ್ಯಂತ ಅಪಾಯಕಾರಿ ಹಾಗೂ ಸಂವಿಧಾನದ ಮೇಲಿನ ದಾಳಿ: ಸೋನಿಯಾ ಗಾಂಧಿ

ರಾಜ್ಯದಲ್ಲಿ ರಣ ಬಿಸಿಲು: 35 ಡಿಗ್ರಿ ತಲುಪಿದ ತಾಪಮಾನ, ಮಳೆ ಮುನ್ಸೂಚನೆ ಇಲ್ಲ ಎಂದ IMD

ಆಗ VOLVO, ಈಗ BMW; ಹಾರುಬೂದಿ ಸಾಗಿಸುತ್ತಿದ್ದ ಲಾರಿ ಉರುಳಿ ಐಶಾರಾಮಿ ಕಾರು ಅಪ್ಪಚ್ಚಿ, Video

SCROLL FOR NEXT