ಬಿಜೆಪಿ ಸಂಸದೀಯ ಮಂಡಳಿ ಸಭೆಗೆ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸುತ್ತಿರುವ ಪ್ರಹ್ಲಾದ್ ಜೋಷಿ ಮತ್ತಿತರರು 
ದೇಶ

ನೀವಾಗೇ ಬದಲಾಗಿ ಅಥವಾ ಬದಲಾವಣೆಗಳನ್ನು ಎದುರಿಸಲು ಸಿದ್ಧರಾಗಿ: ಸಂಸದರಿಗೆ ಮೋದಿ ಎಚ್ಚರಿಕೆ!

​ಸಂಸತ್ ನಲ್ಲಿ ಬಿಜೆಪಿ ಸಂಸದರ ಬದ್ಧತೆಯ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಗರಂ ಆಗಿದ್ದಾರೆ. 

ನವದೆಹಲಿ: ಸಂಸತ್ ನಲ್ಲಿ ಬಿಜೆಪಿ ಸಂಸದರ ಬದ್ಧತೆಯ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಗರಂ ಆಗಿದ್ದಾರೆ. 

ಹಾಜರಾತಿಯ ವಿಷಯದಲ್ಲಿ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದು, ಸಂಸದರು ತಮ್ಮನ್ನು ಬದಲಾಯಿಸಿಕೊಳ್ಳದೇ ಇದ್ದಲ್ಲಿ ಸಮಯದ ಜೊತೆ ಬದಲಾವಣೆ ಎದುರಿಸಲು ಸಿದ್ಧರಾಗಬೇಕಾಗುತ್ತದೆ ಎಂದು ಮೋದಿ ಎಚ್ಚರಿಕೆ ನೀಡಿದ್ದಾರೆ. 

ನವದೆಹಲಿಯ ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಮೋದಿ ಸಂಸದರಿಗೆ ಈ ಎಚ್ಚರಿಕೆ ನೀಡಿದ್ದಾರೆ. 

ಸಭೆಯ ವಿವರಗಳನ್ನು ಹಂಚಿಕೊಂಡಿರುವ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಸಂಸದರು ಎಲ್ಲರೂ ತಮ್ಮ ಕ್ಷೇತ್ರಗಳಲ್ಲಿ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಬೇಕು ಎಂದು ಪ್ರಧಾನಿ ಮೋದಿ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ. 

ಸಂಸದರ ಹಾಜರಾತಿ ಬಗ್ಗೆಯೂ ಮೋದಿ ಸಲಹೆಗಳನ್ನು ನೀಡಿದ್ದು, ಸಂಸತ್ ಅಧಿವೇಶನದ ಕಲಾಪಗಳಲ್ಲಿ ಸಂಸದರು ತಪ್ಪದೇ ಭಾಗಿಯಾಗಬೇಕು, ಮಕ್ಕಳೂ ಸಹ ಪದೇ ಪದೇ ಹೇಳಿದರೆ ಮಾಡಿದ ತಪ್ಪನ್ನೇ ಮಾಡುವುದಿಲ್ಲ ಎಂದು ಸಂಸದರಿಗೆ ಎಚ್ಚರಿಕೆ ನೀಡಿದ್ದಾರೆ.
 
ನೀವಾಗಿಯೇ ಬದಲಾಗಿ ಇಲ್ಲದೇ ಇದ್ದಲ್ಲಿ ಕಾಲದ ಜೊತೆ ಬದಲಾವಣೆ ತಾನಾಗಿಯೇ ಆಗಲಿದೆ ಎಂದು ಸಂಸದರಿಗೆ ಮೋದಿ ಎಚ್ಚರಿಕೆ ನೀಡಿರುವುದಾಗಿ ಮೂಲಗಳು ತಿಳಿಸಿವೆ. ಸಂಸತ್ ಅಧಿವೇಶನಗಳಲ್ಲಿ ಬಿಜೆಪಿ ಸಂಸದರ ಕಡಿಮೆ ಹಾಜರಾತಿಯ ವಿಷಯವಾಗಿ ಮೋದಿ ಈ ಹಿಂದೆಯೂ ಹಲವು ಬಾರಿ ಎಚ್ಚರಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!