ಆಂಗ್ ಸಾನ್ ಸೂಕಿ 
ದೇಶ

ಮ್ಯಾನ್ಮಾರ್: ಆಂಗ್ ಸಾನ್ ಸೂಕಿಗೆ ಜೈಲು ಶಿಕ್ಷೆ; ನ್ಯಾಯಾಲಯದ ತೀರ್ಪಿನಿಂದ ಆಘಾತವಾಗಿದೆ ಎಂದ ಭಾರತ

ಮ್ಯಾನ್ಮಾರ್ ನಾಗರಿಕ ಹೋರಾಟಗಾರ್ತಿ ಆಂಗ್ ಸಾನ್ ಸೂಕಿ ವಿಧಿಸಲಾಗಿರುವ ಜೈಲು ಶಿಕ್ಷೆ ಕುರಿತು ಭಾರತ ಆಘಾತ ವ್ಯಕ್ತಪಡಿಸಿದೆ.

ನವದೆಹಲಿ: ಮ್ಯಾನ್ಮಾರ್ ನಾಗರಿಕ ಹೋರಾಟಗಾರ್ತಿ ಆಂಗ್ ಸಾನ್ ಸೂಕಿ ವಿಧಿಸಲಾಗಿರುವ ಜೈಲು ಶಿಕ್ಷೆ ಕುರಿತು ಭಾರತ ಆಘಾತ ವ್ಯಕ್ತಪಡಿಸಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು, 'ಮ್ಯಾನ್ಮಾರ್ ನಾಗರಿಕ ಹೋರಾಟಗಾರ್ತಿ ಆಂಗ್ ಸಾನ್ ಸೂಕಿ ಹಾಗೂ ಇನ್ನೂ ಕೆಲವರ ವಿರುದ್ಧ ಮ್ಯಾನ್ಮಾರ್ ನ್ಯಾಯಾಲಯ ನೀಡಿರುವ ತೀರ್ಪಿನಿಂದ ಆಘಾತವಾಗಿ ಎಂದು ಹೇಳಿದ್ದಾರೆ. 

ಮ್ಯಾನ್ಮಾರ್‌ನಲ್ಲಿ ಸೂಕಿ ಮತ್ತು ಇತರರ ವಿರುದ್ಧ ನೀಡಲಾಗಿರುವ ತೀರ್ಪುಗಳಿಗೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗಳಿಗೆ  ಪ್ರತಿಕ್ರಿಯಿಸಿದ ಅವರು, 'ಇತ್ತೀಚಿನ ತೀರ್ಪುಗಳಿಂದ ನಾವು ಆಘಾತಗೊಂಡಿದ್ದೇವೆ. ನೆರೆಯ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಭಾರತವು ಮ್ಯಾನ್ಮಾರ್‌ನಲ್ಲಿ ಪ್ರಜಾಸತ್ತಾತ್ಮಕ ಪರಿವರ್ತನೆಯನ್ನು ನಿರಂತರವಾಗಿ ಬೆಂಬಲಿಸುತ್ತಿದೆ. ಕಾನೂನು ಮತ್ತು ಪ್ರಜಾಪ್ರಭುತ್ವದ ಪ್ರಕ್ರಿಯೆಗಳನ್ನು ಎತ್ತಿ ಹಿಡಿಯಬೇಕು ಎಂಬುದರಲ್ಲಿ ನಂಬಿಕೆ ಇಟ್ಟಿದ್ದೇವೆ. ಆ ಪ್ರಕ್ರಿಯೆಯನ್ನು ದುರ್ಬಲಗೊಳಿಸುವ ಯಾವುದೇ ಘಟನೆಗಳು ನಡೆಯುವುದು ಕಳವಳದ ಸಂಗತಿ. ಅಂತೆಯೇ ಆ ದೇಶದ ಭವಿಷ್ಯವನ್ನು ಗಮನದಲ್ಲಿರಿಸಿ, ಮಾತುಕತೆ ನಡೆಸಲು ಸಾಧ್ಯವಿರುವ ಎಲ್ಲ ಪ್ರಯತ್ನವನ್ನು ಮಾಡಲಾಗುವುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಬಂಧನವೇಕೆ?
ಮ್ಯಾನ್ಮಾರ್‌ ಆಡಳಿತವನ್ನು ಅಲ್ಲಿನ ಸೇನೆಯು ಫೆಬ್ರವರಿಯಲ್ಲಿ ಹಿಡಿತಕ್ಕೆ ಪಡೆದಿತ್ತು. ಅದಾದ ಬಳಿಕ ಬೃಹತ್‌ ಪ್ರತಿಭಟನೆಗಳು ನಡೆದಿದ್ದವು. ಈ ವೇಳೆ ನಡೆದ ಹಿಂಸಾಚಾರದಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ನೂರಾರು ಮಂದಿ ಮೃತಪಟ್ಟಿದ್ದರು. ನ್ಯಾಷನಲ್‌ ಲೀಗ್ ಫಾರ್ ಡೆಮಾಕ್ರಸಿ (ಎನ್‌ಎಲ್‌ಡಿ) ನಾಯಕಿ ಸೂಕಿ ಸೇರಿದಂತೆ ಹಲವು ಪ್ರಮುಖ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಲಾಗಿತ್ತು. ಕೋವಿಡ್ ನಿಯಮ ಉಲ್ಲಂಘನೆ ಮತ್ತು ಶಾಂತಿ ಭಂಗ ಉಂಟುಮಾಡಿದ ಆರೋಪಗಳಿಗೆ ಸಂಬಂಧಿಸಿದಂತೆ ಸೂಕಿ ಅವರಿಗೆ ನಾಲ್ಕು ವರ್ಷ ಶಿಕ್ಷೆ ಪ್ರಕಟಿಸಲಾಗಿತ್ತು. ಬಳಿಕ ಶಿಕ್ಷೆಯ ಪ್ರಮಾಣವನ್ನು ಎರಡು ವರ್ಷಕ್ಕೆ ಇಳಿಸಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT